-ನೇರ-ನೇಮಕಾತಿಗೆ-ಸಂದರ್ಶನ
ಮಡಿಕೇರಿ, ಮೇ 14 : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ತಾ. 16 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ನೇಮಕಾತಿಗೆ ಸಂದರ್ಶನ ನಡೆಯಲಿದೆ. 
ಈ ನೇಮಕಾತಿ ಪ್ರಕ್ರಿಯೆಯಲ್ಲಿ ವುಡ್‍ಸ್ಟಾಕ್ ವಿಲಾಸ್, ಮಡಿಕೇರಿ, ಕಾಗ್‍ನೆಟ್ ಇ-ಸರ್ವಿಸ್ ಪ್ರೈ ಲಿ., ಮಂಗಳೂರು ಮತ್ತು ಉಬೆರ್ ಇಂಡಿಯಾ ಪ್ರೈ.ಲಿ., ಬೆಂಗಳೂರು ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಕಾಗ್‍ನೆಟ್ ಇ-ಸರ್ವಿಸಸ್ ಪ್ರೈ.ಲಿ., ಮಂಗಳೂರು ಸಂಸ್ಥೆಯು ಗ್ರಾಹಕ ಸೇವಾ ಸಿಬ್ಬಂದಿಗಳ ಹುದ್ದೆಗಾಗಿ ನೇಮಕಾತಿಯನ್ನು ನಡೆಸಲಿದ್ದಾರೆ. ಉಬೆರ್ ಇಂಡಿಯಾ ಪ್ರೈ.ಲಿ., ಬೆಂಗಳೂರು ಸಂಸ್ಥೆಯು ವಾಹನ ಚಾಲಕರ ಹುದ್ದೆಗಳಿಗೆ ನೇಮಕಾತಿ ನಡೆಸಲಿದ್ದಾರೆ. 
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ ಹಾಗೂ ಯಾವದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ನೇರ ನೇಮಕಾತಿ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ನೇಮಕಾತಿ ಸಂದರ್ಶನದಲ್ಲಿ ಹಾಜರಾಗುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ. 

Home    About us    Contact