ಅನಧಿಕೃತ-ನೀರಿನ-ಬಾಟಲಿ-ಮಾರಾಟ-ನಿಷೇಧಕ್ಕೆ-ಸೂಚನೆ

 ಮಡಿಕೇರಿ, ಮೇ 20: ಕುಡಿಯುವ ನೀರಿನ ಐಎಸ್‍ಐ ಪ್ರಮಾಣಿಕೃತ ಬಾಟಲಿ ಶುದ್ಧ ನೀರಿನ ಬಳಕೆಯನ್ನು ಹೊರತು ಪಡಿಸಿ ಅನಧೀಕೃತ ನೀರಿನ ಘಟಕಗಳು ತಯಾರಿಸಿ ಮಾರಾಟ ಮಾಡುವಂತಹ ಕುಡಿಯುವ ನೀರಿನ ಬಾಟಲಿಗಳ ಮಾರಾಟ ನಿಷೇಧಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಬಗ್ಗೆ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿಅವರು ಮಾತನಾಡಿದರು. ನಗರಸಭೆ, ಆರೋಗ್ಯ ಇಲಾಖೆ, ಜಿಲ್ಲಾ ಆಹಾರ ಸುರಕ್ಷತೆ ಅಂಕಿತಾಧಿಕಾರಿಗಳ ಸಹಯೋಗದೊಂದಿಗೆ ಹೊಟೇಲ್‍ಗಳಲ್ಲಿ, ರಸ್ತೆ ಬದಿ ಮಾರಾಟ ಮಾಡುವ ಆಹಾರ ಪದಾರ್ಥಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅವರು ನಿರ್ದೇಶನ ನೀಡಿದರು. 

ಪಡಿತರ ವಿತರಣೆಯಡಿಯಲ್ಲಿ ವಿತರಣೆ ಮಾಡಲಾಗುವ ಆಹಾರ ಪದಾರ್ಥಗಳ ಪರೀಕ್ಷೆಗೆ ಒಳಪಟ್ಟು ಬಂದಂತಹ ಪದಾರ್ಥಗಳನ್ನೇ ವಿತರಿಸಬೇಕು. ಹಾಗೂ ಅಂಗನವಾಡಿಗೆ ಪೂರೈಕೆಯಾಗುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಖಾತರಿಪಡಿಸಿಕೊಂಡು ನಂತರ ಬಳಸಬೇಕು ಎಂದು ಆಹಾರ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು. 
ಸಿದ್ಧ ಆಹಾರ ಪದಾರ್ಥಗಳ ಬಳಕೆಗೆ ಇರುವಂತಹ ಮಾನದಂಡವನ್ನು ಪಾಲಿಸುವಂತೆ ಸಂಬಂಧಪಟ್ಟ ಹೊಟೇಲ್‍ಗಳು ಹಾಗೂ ಮಾರಾಟ ಮಳಿಗೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಕಾಲ ಕಾಲಕ್ಕೆ ಭೇಟಿ ನೀಡಿ ಪರೀಕ್ಷೆಗೆ ಒಳಪಡಿಸಿ ಆಹಾರ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಮತ್ತು ಜಿಲ್ಲೆಯಲ್ಲಿ ಬೀದಿ ಬದಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವಲ್ಲಿ, ಕುರಿ, ಕೋಳಿ, ಹಂದಿ, ಮೀನು ಮಾಂಸ ಮಾರಾಟ ಸ್ಥಳಗಳಲ್ಲಿ ಹೆಚ್ಚಿನ ಸ್ವಚ್ಛತೆ ಹಾಗೂ ಆಹಾರ ಸುರಕ್ಷತಾ ಮತ್ತು ಗುಣಮಟ್ಟವನ್ನು ಕಾಪಾಡಿಕೊಳ್ಳಲು ಹೆಚ್ಚಿನ ನಿಗಾವಹಿಸಬೇಕು. 
ಅನಧಿಕೃತ ನೀರಿನ ಬಾಟಲಿ ಮಾರಾಟ ನಿಷೇಧಕ್ಕೆ ಸೂಚನೆu ಐದನೇ ಪುಟಕ್ಕೆ (ಮೊದಲ ಪುಟದಿಂದ) ಈ ಸಂಬಂಧ ಸಂಬಂದಪಟ್ಟ ಅಧಿಕಾರಿಗಳು ಕಾಲಕಾಲಕ್ಕೆ ತಪಾಸಣೆ ಮಾಡಿ ಲೋಪಗಳು ಕಂಡು ಬಂದಲ್ಲಿ ನಿರ್ದಾಕ್ಷೀಣ ಕ್ರಮಕೈಗೊಳ್ಳಬೇಕು ಎಂದು ಅವರು ತಿಳಿಸಿದರು. 
 ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಗೌರವ್ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅರುಂಧತಿ, ಜಿಲ್ಲಾ ಸರ್ವೇಕ್ಷಣಾ ಘಟಕದ ಡಾ.ಶಿವಕುಮಾರ್, ನಗರಸಭೆ ಆಯುಕ್ತ ರಮೇಶ್, ಮೋಂತಿ ಗಣೇಶ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Home    About us    Contact