ಹವಾಮಾನ-ಮುನ್ಸೂಚನೆ

 ಮಡಿಕೇರಿ, ಆ. 13: ಕೇರಳ ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಇದರ ಪ್ರಭಾವದಿಂದ ಈ ಹಿಂದೆ ತಿಳಿಸಿದಂತೆ ಕೊಡಗು ಜಿಲ್ಲೆಯಲ್ಲಿ ಸಾಮಾನ್ಯ ಮಳೆಯಾಗಲಿದೆ ಹಾಗೂ ಒಳನಾಡು ಪ್ರದೇಶಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುತ್ತದೆ. ಹೆಚ್ಚಿನ ಮಳೆಯಿಂದ ಬೆಟ್ಟಗುಡ್ಡ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಸಂಭವ ಇರುತ್ತದೆ.ಈಗಾಗಲೇ ಪರಿಹಾರ ಕೇಂದ್ರದಲ್ಲಿರುವ ಸಂತ್ರಸ್ತರು ತಾ. 15ರ ವರೆಗೆ ಪರಿಹಾರ ಕೇಂದ್ರಗಳಲ್ಲೇ ಇರಲು ಹಾಗೂ ಜಿಲ್ಲೆಯಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯಿಂದ ಮತ್ತು ಕೆಲವು ಪ್ರದೇಶಗಳಲ್ಲಿ ಭೂಕುಸಿತದಿಂದ ರಸ್ತೆ ಸಂಪರ್ಕಗಳು ಕಡಿತಗೊಂಡಿರುವದರಿಂದ ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದಿರಲು ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.


Home    About us    Contact