-ಇಂದು-ವಾಲಿಬಾಲ್-ಪಂದ್ಯಾವಳಿ
 
ಕೂಡಿಗೆ, ಅ. 9 : ಜಿಲ್ಲಾ ಪಂಚಾಯತ್,  ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸೋಮವಾರಪೇಟೆ ತಾಲೂಕು ಹಾಗೂ ಯೂನಿಕ್ ಆಕಾಡೆಮಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಕೂಡ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ತಾ.10 ಮತ್ತು 11 ರಂದು ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿ ನಡೆಯಲಿದೆ. 
14-17ರ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟಗಳು ಕೂಡಿಗೆ ಡಯಟ್ ಮೈದಾನದಲ್ಲಿ ನಡೆಯಲಿವೆ.  ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ, ಸಚಿವ ವಿ.ಸೋಮಣ್ಣ ನೆರವೇರಿಸಲಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರ ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಲಿದೆ. ಕ್ರೀಡಾ ಧ್ವಜಾರೋಹಣವನ್ನು ವೀರಾಜಪೇಟೆ ಕ್ಷೇತ್ರ ಶಾಸಕ ಕೆ.ಜಿ ಬೋಪಯ್ಯ ನೆರವೇರಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ.ಹರೀಶ್ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಅತಿಥಿಗಳಾಗಿ ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‍ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
 

Home    About us    Contact