ಮಡಿಕೇರಿ, ಜೂ. 22: ಕೊಡಗು ಜಿಲ್ಲೆಯಾದ್ಯಂತ ತಾ. 23ರಂದು (ಇಂದು) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್‍ನ ಪ್ರಕಟಣೆ ತಿಳಿಸಿದೆ. ಬಸ್ತಿಪುರ 400 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಕಾಮಗಾರಿ ನಿರ್ವಹಿಸಬೇಕಾದ ಹಿನ್ನೆಲೆಯಲ್ಲಿ ತಾ. 23ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ತನಕ ಕೊಡಗು ಜಿಲ್ಲೆಯಾದ್ಯಂತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಇಲಾಖೆಯ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.