ಮಡಿಕೇರಿ, ಆ. 31: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ತಾ. 1 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ರಾಷ್ಟ್ರೀಯ ಪೌಷ್ಠಿಕಾಂಶ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಮತ್ತು ಕಾನೂನು ಶಿಬಿರ ನಡೆಯಲಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾಸ್ಟರ್ ಆರ್.ಕೆ.ಜಿ. ಎಂ.ಎಂ.ಮಹಾಸ್ವಾಮೀಜಿ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು, ಅಪರ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಸಿ.ಟಿ. ಜೋಸೆಫ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಓ.ಆರ್. ಶ್ರೀರಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾಗರಾಜು ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಮಡಿಕೇರಿ ಡಿ.ಸಿ.ಎಂ.ಓ. ಡಾ. ದೇವಿ ಆನಂದ್ ಅವರು ಪೌಷ್ಠಿಕಾಂಶದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.