ಮಡಿಕೇರಿ, ಸೆ. 8: ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಘಟಕದೊಳಗಿನ ಪರಸ್ಪರ ಮತ್ತು ಕೋರಿಕೆ ವರ್ಗಾವಣೆ ಪ್ರಕ್ರಿಯೆ ತಾ. 9 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯಲ್ಲಿ ತಾ. 16 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಬಿ.ಆರ್.ಸಿ. ಕೇಂದ್ರದಲ್ಲಿ ಘಟಕದೊಳಗಿನ ಪದವಿಧರೇತರ ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಸಹ ಶಿಕ್ಷಕರ ಕೋರಿಗೆ ವರ್ಗಾವಣೆ ಕೌನ್ಸಿಲಿಂಗ್ ನಡೆಯಲಿದೆ. ಆದ್ಯತಾ ಪಟ್ಟಿಯಲ್ಲಿ ಹೆಸರು ಇರುವ ಶಿಕ್ಷಕರು ನಿಗದಿತ ದಿನದಂದು ನಿಗಧಿತ ಕಾಲಕ್ಕೆ ಸರಿಯಾಗಿ ಕೌನ್ಸೆಲಿಂಗ್‍ಗೆ ಹಾಜರಾಗುವದು ವಿಳಂಬವಾಗಿ ಹಾಜರಾದ ಶಿಕ್ಷಕರು ಕೌನ್ಸಿಲಿಂಗ್‍ಗೆ ಅರ್ಹರಾಗಿರುವದಿಲ್ಲ. ಆದ್ಯತಾ ಪಟ್ಟಿಯಲ್ಲಿ ತಿತಿತಿ.sಛಿhooಟeeಜuಛಿಚಿಣioಟಿ,ಞಚಿಡಿ.ಟಿiಛಿ.iಟಿ ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಪರಿಶೀಲಿಸುವದು ಹಾಗೂ ಕೌನ್ಸಿಲಿಂಗ್‍ಗೆ ಹಾಜರಾಗುವ ಶಿಕ್ಷಕರು ಯಾವ ಆದ್ಯತೆ ಕೋರಿ ಅರ್ಜಿ ಸಲ್ಲಿಸಿರುತ್ತಾರೆಯೋ ಆದ್ಯತೆ ಪುಷ್ಟೀಕರಿಸುವ ಮೂಲ ದಾಖಲೆಗಳೊಂದಿಗೆ ಕೌನ್ಸಿಲಿಂಗ್‍ಗೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್. ಬಸವರಾಜು ತಿಳಿಸಿದ್ದಾರೆ.