ಮಡಿಕೇರಿ, ಜೂ. 20: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2015ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯವರಾಗಿರ ಬೇಕು. ಸ್ವ-ವಿವರವುಳ್ಳ ಮನವಿ ಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲ ವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು, ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವದೇ ಧರ್ಮ, ದೇವರು, ಜಾತಿ ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿ ದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಹಾಗೆಯೇ ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ, ಸಂಗತಿಗಳು ಪ್ರಸ್ತಾಪವಾಗಿರ ಬಾರದು, ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು, ಹಸ್ತಪ್ರತಿಗಳನ್ನು ಹಿಂದಿರುಗಿಸುವದಿಲ್ಲ. ಆದ ಕಾರಣ ಹಸ್ತಪ್ರತಿ-ಡಿ.ಟಿ.ಪಿ ಪ್ರತಿಯ ಎರಡನೇ ಪ್ರತಿಯನ್ನು ಸಲ್ಲಿಸಲು ತಿಳಿಸಿದೆ. ಅರ್ಜಿಯನ್ನು ತಾ. 30 ರಂದು ಸಂಜೆ 5.30 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು ಅವರ ಹೆಸರಿಗೆ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-02, ದೂರವಾಣಿ ಸಂಖ್ಯೆ: 080-22484516 / 22017704 ಇಲ್ಲಿ ಸಂಪರ್ಕಿಸ ಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕುಳ್ಳಯ್ಯ ಕೋರಿದ್ದಾರೆ.