ಆಲೂರು ಸಿದ್ದಾಪುರ, ಜ3: ಸಮೀಪದ ಶನಿವಾರಸಂತೆ ಗೆಳಯರ ಬಳಗ ಸಾಂಸ್ಕøತಿಕ ವೇದಿಕೆ ವತಿಯಿಂದ ನೂತನ ವರ್ಷಾಚರಣೆಯ ಅಂಗವಾಗಿ ಶನಿವಾರಸಂತೆ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಸ್ವರ-ಸಂಭ್ರಮ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ವಿದ್ಯಾರ್ಥಿ ಪ್ರತಿಭೆಗಳು ಸಾಮೂಹಿಕವಾಗಿ ಉದ್ಘಾಟಿಸಿದರು.

ಸ್ವರ-ಸಂಭ್ರಮ ಕಾರ್ಯಕ್ರಮದ ಕುರಿತು ಮಾತನಾಡಿದ ಸ್ಥಳೀಯ ವಿಘ್ನೇಶ್ವರ ಬಾಲಕಿಯರ ವಿದ್ಯಾಸಂಸ್ಥೆ ಉಪನ್ಯಾಸಕ ಕೆ.ಪಿ.ಜಯಕುಮಾರ್-ಮಕ್ಕಳಲ್ಲಿ ಅಡಗಿರುವ ನಾನಾ ಪ್ರತಿಭೆಗಳನ್ನು ಗುರುತಿಸಲು ವೇದಿಕೆಗಳ ಅವಶ್ಯಕತೆವಿರುತ್ತದೆ, ಶಾಲಾ-ಕಾಲೇಜುಗಳಲ್ಲಿ ನಡೆಯುವ ಸಾಂಸ್ಕøತಿ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವದು ಸಹಜವಾಗಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲೆ ಮತ್ತು ಹೊರ ಜಿಲ್ಲೆಯಿಂದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದರು, ಸ್ವರ-ಸಂಭ್ರಮ ಕಾರ್ಯಕ್ರಮದಲ್ಲಿ ಚಲನಚಿತ್ರಗೀತೆ, ಸುಗಮ ಸಂಗೀತ, ಜಾನಪದ ಹಾಡು, ನೃತ್ಯ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಅತ್ಯುತ್ತಮ ಗಾಯಕ-ಗಾಯಕಿಯರನ್ನು ಆಯ್ಕೆಮಾಡಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಜಿ.ಪಂ.ಸದಸ್ಯೆ ಸರೋಜಮ್ಮ, ಗೆಳೆಯರ ಬಳಗ ವೇದಿಕೆಯ ದಿವಾಕರ್, .ಜವರಯ್ಯ,, ಎಂ.ಕೆ.ಕೃಷ್ಣ, ಪರಮೇಶ್ವರಪ್ಪ, ಯುವ ಗಾಯಕರಾದ ಶ್ರೀನಿವಾಸ್, ಕಿರಣ್‍ಚಂದ್ರ ಮತ್ತು ಗೆಳೆಯರ ಬಳಗ ವೇದಿಕೆಯ ಪದಾಧಿಕಾರಿಗಳು ಹಾಜರಿದ್ದರು.