ಮಡಿಕೇರಿ, ನ.25 : ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾ.ಪಂ. ನೌಕರರ ಸಂಘದ ಸೋಮವಾರಪೇಟೆ ತಾಲೂಕು ಸಮಿತಿಯ ತಾಲೂಕು ಸಮಾವೇಶದ ಭಾಗವಾಗಿ ವಿಚಾರ ಸಂಕಿರಣ ಕಾರ್ಯಕ್ರಮ ತಾ. 27 ರಂದು ಸೋಮವಾರಪೇಟೆಯಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷÀ ಪಿ.ಆರ್.ಭರತ್ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು “ಪಂಚಾಯತ್ ರಾಜ್ ಬೆಳವಣಿಗೆಯಲ್ಲಿ ನೌಕರರ ಪಾತ್ರ” ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ ಎಂದು ಹೇಳಿದ್ದಾರೆ. ತಾ.ಪಂ. ಸಭಾಂಗಣದ ಸಮೀಪವಿರುವ ಶ್ರೀಶಕ್ತಿ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿಜಿವಿಎಸ್‍ನ ಉಪಾಧ್ಯಕ್ಷರು ಹಾಗೂ ನಿವೃತ್ತ ಶಿಕ್ಷಕ ಪಿ.ಕೆ.ಲತೀಫ್ ವಿಷಯ ಮಂಡನೆ ಮಾಡಲಿದ್ದಾರೆ.

ಗ್ರಾ.ಪಂ. ನೌಕರರ ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಬಿ.ಎಸ್.ಪುನಿತ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ಮಳವಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಶಾಂತ್ ಬಾಬು, ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಉಪಾಧ್ಯಕ್ಷರುಗಳಾದ ಕೆ.ಎಂ.ಚೆನ್ನಪ್ಪ, ಟಿ.ಕೆ.ಮೂರ್ತಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಉಪಕಾರ್ಯದರ್ಶಿ ಪಿ.ಉಮೇಶ್, ಸದಸ್ಯರಾದ ಫೌಸಿಯಾ ಹಾಗೂ ಎ.ಅಣ್ಣಪ್ಪ ಉಪಸ್ಥಿತರಿರುವರು ಎಂದು ಪಿ.ಆರ್.ಭರತ್ ತಿಳಿಸಿದ್ದಾರೆ.