ಮಡಿಕೇರಿ, ಜೂ. 20: ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ, ಆಹಾರ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವ ಸರ್ಕಾರದ ಕ್ರಮವನ್ನು ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಜನಾನುರಾಗಿ ಸಚಿವರಾಗಿದ್ದ ದಿನೇಶ್ ಗುಂಡೂರಾವ್ ಅವರ ಬದಲಾವಣೆಯಿಂದ ಕೊಡಗಿಗೆ ಅನ್ಯಾಯವಾದಂತಾಗಿದೆ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಜಿಲ್ಲಾ ಪಂಚಾಯ್ತಿ ಸದಸ್ಯೆ ಕುಮುದಾ ಧರ್ಮಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.