ಸೋಮವಾರಪೇಟೆ, ಜೂ. 26: ರಾಜ್ಯ ಸರ್ಕಾರದ ಅಪೆಂಡಿಕ್ಸ್ ಇ ಯೋಜನೆಯಡಿ ರೂ. 3 ಕೋಟಿ ಹಾಗೂ ಕೊಡಗು ಪ್ಯಾಕೇಜ್ ವತಿಯಿಂದ 1 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಿರಗಂದೂರು-ಗುಬ್ಬನಮನೆ-ತಾಕೇರಿ-ಬಾರ್ಲಗದ್ದೆ-ಹರಗ ಮೂಲಕ ರಾಜ್ಯ ಹೆದ್ದಾರಿ ಸಂಪರ್ಕಿಸುವ ನೂತನ ರಸ್ತೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.

6.70 ಕಿ.ಮೀ. ಉದ್ದದ ರಸ್ತೆಯನ್ನು ಒಟ್ಟು 4 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದು, ಈ ಭಾಗದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಿದಂತಾಗಿದೆ ಎಂದು ರಂಜನ್ ಹೇಳಿದರು.

ಈ ಸಂದರ್ಭ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಸಾಮಾಜಿಕ ಸ್ಥಾಯಿ ಅಧ್ಯಕ್ಷ ಧರ್ಮಪ್ಪ, ತಾ.ಪಂ. ಮಾಜೀ ಅಧ್ಯಕ್ಷ ಮುತ್ತಣ್ಣ, ಕಿರಗಂದೂರು ವಿಎಸ್‍ಎಸ್‍ಎನ್ ಅಧ್ಯಕ್ಷ ಬೋಪಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.