ಮಡಿಕೇರಿ, ಆ.3 : ಇತ್ತೀಚೆಗೆ ಮೈಸೂರಿನ ನ್ಯಾಯಾಲಯದ ಶೌಚಾಲಯದಲ್ಲಿ ಸ್ಫೋಟ ನಡೆದ ನಂತರ ರಾಜ್ಯದ ಪೆÇಲೀಸರು ಎಚ್ಚೆತ್ತು ಕೊಂಡಿದ್ದು, ಆಯಾ ಜಿಲ್ಲಾ ವ್ಯಾಪ್ತಿಯ ಕೋರ್ಟ್ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪೆÇಲೀಸ್ ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಬುಧವಾರ ನ್ಯಾಯಾಲಯದ ಒಳಗೆ ಮತ್ತು ಹೊರಗೆ ಶ್ವಾನ ದಳ ಹಾಗೂ ಬಾಂಬ್ ಪತ್ತೆ ದಳ ಪರಿಶೀಲನೆ ನಡೆಸುವ ಮೂಲಕ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಕೋರ್ಟ್ ಆವರಣ ಮಾತ್ರವಲ್ಲದೆ ಪ್ರವಾಸಿಗರು ಸೇರುವ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಕಣ್ಗಾವಲು ಇರಿಸಲಾಗಿದೆ. ರಾಜಾಸೀಟ್ ಸೇರಿದಂತೆ ಎಲ್ಲಾ ಪ್ರವಾಸಿ ತಾಣಗಳು, ದೇವಾಲಯ, ಪ್ರಾರ್ಥನಾ ಮಂದಿರಗಳು, ಬಸ್ ನಿಲ್ದಾಣ, ಸಿನಿಮಾ ಮಂದಿರ ಸೇರಿದಂತೆ ವಿವಿಧೆಡೆ ಬಾಂಬ್ ಪತ್ತೆದಳ ಮತ್ತು ಶ್ವಾನದಳ ಕಾರ್ಯಾಚರಿಸುತ್ತಿದೆ ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್ ಪತ್ರಿಕೆಗೆ ತಿಳಿಸಿದ್ದಾರೆ.

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಸ್ಫೋಟ ಪ್ರಕರಣ ಮತ್ತು ತಾ.15 ರಂದು ಸ್ವಾತಂತ್ರ್ಯ ದಿನಾಚರಣೆÉಯನ್ನು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಭಾಗಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಸ್ವಾತಂತ್ರ್ಯೋತ್ಸವದಂದು ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಇರುವದಲ್ಲದೆ, ದೇಶದ ವಿವಿಧೆಡೆ ಉಗ್ರರಿಂದ ದುಷ್ಕøತ್ಯಗಳು ನಡೆಯುವ ಸಂಭವದ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪೆÇಲೀಸರು ಕೂಡ ಕಟ್ಟೆಚ್ಚರ ವಹಿಸಿದ್ದು, ಜಿಲ್ಲೆಯಲ್ಲೂ ಪೆÇಲೀಸರು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದಾರೆ.