ಕುಶಾಲನಗರ, ಜು. 13: ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಗೆ ದಾಖಲಾಗಿದ್ದ ಅಪರಿಚಿತ ವೃದ್ಧನೋರ್ವ ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ.

ಇಬ್ರಾಹಿಂ (75) ಮೃತಪಟ್ಟ ವೃದ್ಧನಾಗಿದ್ದು ಜೂನ್ 29 ರ ರಾತ್ರಿ ಕುಶಾಲನಗರ ಪಟ್ಟಣದಲ್ಲಿ ದ್ವಿಚಕ್ರ ವಾಹನವೊಂದು ಡಿಕ್ಕಿಪಡಿಸಿದ ಪರಿಣಾಮ ಕೈ, ಕಾಲು ಮತ್ತು ತಲೆಗೆ ಗಾಯಗಳಾಗಿದ್ದರಿಂದ ಅವರನ್ನು ಕುಶಾಲನಗರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವೃದ್ಧನ ವಿಳಾಸ ಹಾಗೂ ವಾರಸುದಾರರು ಬಗ್ಗೆ ಯಾವದೇ ಮಾಹಿತಿ ಲಭ್ಯವಾದಲ್ಲಿ ಕುಶಾಲನಗರ ಪೊಲೀಸ್ ಠಾಣೆ 08276-274333 ಗೆ ಸಂಪರ್ಕಿಸಲು ಕೋರಲಾಗಿದೆ.