ಶನಿವಾರಸಂತೆ, ಜು. 5: ಪರಿಸರ ಹಾಗೂ ಅರಣ್ಯವನ್ನು ಉಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮತ್ತು ಅರಣ್ಯ ಇಲಾಖೆ ಹಮ್ಮಿಕೊಂಡಿರುವ ವನ ಮಹೋತ್ಸವ 2016ನೇ ಸಾಲಿನ ಕೋಟಿ ವೃಕ್ಷ ಆಂದೋಲನ ಕಾರ್ಯಕ್ರಮದ ಅಂಗವಾಗಿ ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕೊಡ್ಲಿಪೇಟೆ ಅರಣ್ಯ ಇಲಾಖೆ ವತಿಯಿಂದ ಗಿಡಗಳನ್ನು ನೆಡುವ ಮೂಲಕ ವನ ಮಹೋತ್ಸವ ಆಚರಿಸಲಾಯಿತು.

ಕೊಡ್ಲಿಪೇಟೆ ಉಪವಲಯ ಅರಣ್ಯಾಧಿಕಾರಿ ಎಸ್.ವೈ. ಸುಕ್ಕೂರ್, ಶನಿವಾರಸಂತೆ ಅರಣ್ಯ ವಲಯಾಧಿಕಾರಿ ಎಂ.ಎಂ. ಅಚ್ಚಪ್ಪ, ಬೆಸೂರು ಗ್ರಾ.ಪಂ. ಅಧ್ಯಕ್ಷೆ ಪಾರ್ವತಿ, ಸದಸ್ಯ ಕೆ.ಬಿ. ಮಲ್ಲೇಶ್, ಶಾಲಾಭಿವೃದ್ಧಿ ಅಧ್ಯಕ್ಷ ಹರೀಶ್, ಮುಖ್ಯ ಶಿಕ್ಷಕಿ ಬಸಮ್ಮ, ಸಹ ಶಿಕ್ಷಕಿಯರಾದ ರುಕ್ಮಿಣಿ, ಶಾಂತಮ್ಮ, ವಿದ್ಯಾರ್ಥಿಗಳು, ಗ್ರಾಮಸ್ಥರು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.