ಕುಟ್ಟ, ಜೂ. 11: ಕುಟ್ಟ ಗಡಿ ಭಾಗದ ಸಿಂಕೋನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ದಾಖಲಾತಿ ಆಂದೋಲನ ನಡೆಯಿತು. ಕುಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾ ಪ್ರಭು ಉದ್ಘಾಟಿಸಿ, ದಾಖಲಾತಿ ಬಗ್ಗೆ ಮಾತನಾಡಿದರು.
ಗ್ರಾಮ ಪಂಚಾಯಿತಿ ಸದಸ್ಯರು, ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ನಿರ್ದೇಶಕ ತಿಮ್ಮಯ್ಯ ಮತ್ತು ಶಾಲಾ ಶಿಕ್ಷಕ ವೃಂದ ಭಾಗವಹಿಸಿದ್ದರು.