ಮಡಿಕೇರಿ, ಜೂ. 30: ದೇವಟ್ ಪರಂಬು ವಿವಾದವನ್ನು ಶಾಸಕರು ಹಾಗೂ ಸಂಸದರು ಸೌಹಾರ್ದ ಯುತವಾಗಿ ಬಗೆಹರಿಸ ಬಹುದಾಗಿತ್ತಾದರೂ ರಾಜಕೀಯ ಲಾಭಕ್ಕಾಗಿ ಮೌನಕ್ಕೆ ಶರಣಾಗಿದ್ದಾರೆ. ಈ ವಿಚಾರದಲ್ಲಿಯೂ ರಾಜಕಾರಣ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ.ಕೆ. ಮಂಜುನಾಥ್ ಕುಮಾರ್ ಆರೋಪಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಾಸಕರು ಹಾಗೂ ಸಂಸದರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಕೊಡಗಿನ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡದ ಬಿಜೆಪಿ ರಾಜಕೀಯ ಲಾಭಕ್ಕಾಗಿ ಕೋಮು ಗಲಭೆಯನ್ನು ಸೃಷ್ಟಿಸುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿ ದ್ದಾರೆ.

ಇತ್ತೀಚೆಗೆ ಬಿಜೆಪಿಯ ಜಿಲ್ಲಾಧ್ಯಕ್ಷ ಮನು ಮುತ್ತಪ್ಪ ಹಾಗೂ ಪ್ರಮುಖರಾದ ರವಿ ಕುಶಾಲಪ್ಪ ಅವರು ಕಾಂಗ್ರೆಸ್ ವಿರುದ್ಧ ಮಾಡಿರುವ ಟೀಕೆಗಳು ಖಂಡನೀಯ. ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಬಣ್ಣವನ್ನು ಬಳಿದು ವಿಷಯಾಂತರ ಮಾಡಿ ಸೋಮವಾರಪೇಟೆಯಲ್ಲಿ ಅಶಾಂತಿ ಮೂಡಿಸುತ್ತಿರುವದಾಗಿ ಆರೋಪಿಸಿದ್ದಾರೆ.

ದೇಶ ಭಕ್ತಿಯ ಹೆಸರಿನಲ್ಲಿ ಬಿಜೆಪಿ ಸಮಾಜದ ಭದ್ರತೆಗೆ ಧಕ್ಕೆ ತರುತ್ತಿದೆ. ದೇಶದ ಭದ್ರತೆ ಮತ್ತು ದೇಶ ಭಕ್ತಿಯ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೂ ಕಾಳಜಿ ಇದೆ. ಆದರೆ, ಬಿಜೆಪಿ ಹಾಗೂ ಸಂಘ ಪರಿವಾರದ ವರ್ತನೆ ಖಂಡನೀಯ. ಸಮಾಜದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುತ್ತಿರುವ ಪೆÇಲೀಸರ ಮೇಲೆ ಅನುಮಾನ ಪಡುವದು ಮತ್ತು ಪೆÀÇಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸುವದು ಸರಿಯಾದ ಕ್ರಮವಲ್ಲ. ಬಿಜೆಪಿ ಮತ್ತು ಸಂಘ ಪರಿವಾರದ ವರ್ತನೆಯನ್ನು ಜಿಲ್ಲೆಯ ಜನ ಗಮನಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಂಜುನಾಥ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಸಮಾಜಕ್ಕೆ ಧಕ್ಕೆ ಉಂಟು ಮಾಡುವ ಎಲ್ಲಾ ಸಂಘಟನೆಗಳನ್ನು ನಿಷೇಧಿಸಭೇಕೆಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಇಲ್ಲದ ಕೊಡಗು ಜಿಲ್ಲೆಯನ್ನು ಸೃಷ್ಟಿಸಲು ಕಾಂಗ್ರೆಸ್ ಶಕ್ತವಾಗಿದೆಯೆಂದು ಮಂಜುನಾಥ್ ಕುಮಾರ್ ಹೇಳಿದ್ದಾರೆ. ರಾಜಕೀಯ ಲಾಭಕ್ಕಾಗಿ ಟಿಪ್ಪು ಜಯಂತಿ ವಿಷಯವನ್ನು ರಾದ್ಧಾಂತ ಮಾಡಿ ಇದೀಗ ಮುಂದಿನ ಚುನಾವಣೆ ಯನ್ನು ದೃಷ್ಟಿಯಲ್ಲಿರಿಸಿ ಕೊಂಡು ದೇವಟ್ ಪರಂಬು ವಿಚಾರವನ್ನು ತರಲಾಗುತ್ತಿದೆ. ಬಿಜೆಪಿ ಮತ್ತು ಸಂಘ ಪರಿವಾರ ಸೋಮವಾರಪೇಟೆಯಲ್ಲಿ ಕೋಮು ಗಲಭೆಗೆ ಕುಮ್ಮಕ್ಕು ನೀಡುತ್ತಿದೆ ಎಂದು ಮಂಜುನಾಥ್ ಕುಮಾರ್ ಆರೋಪಿಸಿದ್ದಾರೆ.