*ಸಿದ್ದಾಪುರ, ಜೂ. 2: ಸಾರ್ವಜನಿಕ ಬಾವಿಯ ಕಲ್ಲುಗಳನ್ನು ಗ್ರಾಮ ಪಂಚಾಯಿತಿ ಸದಸ್ಯರು ನಿಯಮ ಬಾಹಿರವಾಗಿ ತಮ್ಮ ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನ ಆರೋಪಿಸಿದ್ದಾರೆ.
ತಾಲೂಕು ಬೋರ್ಡ್ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ವಾಲ್ನೂರು-ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ದೇವಸ್ಥಾನದ ಬಳಿ ಸಾರ್ವಜನಿಕ ತೆರೆದ ಬಾವಿಯೊಂದನ್ನು ನಿರ್ಮಿಸಲಾಗಿತ್ತು. ಕಳೆದ ಹಲವು ವರ್ಷಗಳಿಂದ ಈ ಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ತೆರದ ಬಾವಿಗೆ ಶಾಲಾ ವಿದ್ಯಾರ್ಥಿಗಳು ಹಾಗೂ ಸಣ್ಣ ಮಕ್ಕಳು ಇಣುಕಿ ನೋಡುತ್ತಿದ್ದು, ಅಪಾಯವನ್ನು ಗುರುತಿಸಿದ ಪಂಚಾಯಿತಿ ಆಡಳಿತ ಬಾವಿಗೆ ಸುತ್ತಲೂ ಬೇಲಿ ನಿರ್ಮಿಸಿ ಸುರಕ್ಷತಾ ಕ್ರಮವನ್ನು ಅನುಸರಿಸಿತ್ತು. ಬಳಿಕ ಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗದ ಹಿನ್ನೆಲೆಯಲ್ಲಿ ಬಾವಿಯನ್ನು ಮುಚ್ಚುವಂತೆ ತೀರ್ಮಾನಿಸಿ ಇದರ ಉಸ್ತುವಾರಿ ಯನ್ನು ಮಾಜಿ ಗ್ರಾಮ ಪಂಚಾಯಿತಿ