ನಾಪೆÉÇೀಕ್ಲು, ಸೆ. 1: ಪ್ರತಿಯೊಬ್ಬ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವದರ ಮೂಲಕ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಬೇಕೆಂದು ನಾಪೆÇೀಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎ. ಇಸ್ಮಾಯಿಲ್ ಸಲಹೆ ನೀಡಿದರು.
ನಾಪೆÉÇೀಕ್ಲು ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ವಲಯ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸೋಲು-ಗೆಲುವು ಮುಖ್ಯವಲ್ಲ. ಕ್ರೀಡೆಯಲ್ಲಿ ಪಾಲ್ಗೊಳ್ಳುವದು ಮುಖ್ಯ. ಈ ಸಂದರ್ಭದಲ್ಲಿ ತಾವು ಹೆಚ್ಚು ಹೆಚ್ಚು ಕಲಿತು ಮುಂದಿನ ಕ್ರೀಡಾ ಕೂಟದಲ್ಲಿ ಅದನ್ನು ಬಳಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಈ ಮೈದಾನದಲ್ಲಿ ತಮ್ಮ ಕ್ರೀಡಾ ವೃತ್ತಿಯನ್ನು ಆರಂಭಿಸಿದ ಹಲವಾರು ವಿದ್ಯಾರ್ಥಿಗಳು ಇಂದು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅವರ ಸಾಧನೆಯನ್ನು ಗುರಿಯಾಗಿಸಿ ಕೊಂಡು ಎಲ್ಲರೂ ಮುನ್ನಡೆಯ ಬೇಕು ಎಂದರು.
ಮುಖ್ಯ ಅಥಿತಿಯಾಗಿ ಆಗಮಿಸಿದ ತಾಲೂಕು ಪಂಚಾಯಿತಿ ಸದಸ್ಯೆ ಕೋಡಿಯಂಡ ಇಂದಿರಾ ಹರೀಶ್ ಮಾತನಾಡಿ ಮಕ್ಕಳು ಪ್ರಾಥಮಿಕ ಹಂತದಿಂದಲೇ ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಂಡು ಉತ್ತಮ ಕ್ರೀಡಾಪಟುಗಳಾಗಿ ರಾಷ್ಟ್ರಕ್ಕೆ ಕೀರ್ತಿ ತರಲು ಪ್ರಯತ್ನಿಸಬೇಕು ಎಂದು ಹಾರೈಸಿದರು.
ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಚೆಯ್ಯಂಡ ತಿಮ್ಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಕ್ರೀಡಾ ಕೂಟದ ಧ್ಯೇಯೋದ್ದೇಶಗಳ ಬಗ್ಗೆ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಕೇಲೇಟಿರ ಪುಷ್ಪ ವಹಿಸಿದ್ದರು. ವೇದಿಕೆಯಲ್ಲಿ ಸಿ.ಆರ್.ಪಿ. ಐಮದೆ, ಮಾಜಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಕೆ.ಎಂ. ರಮೇಶ್ ಮತ್ತಿತರರು ಇದ್ದರು.
ಕ್ರೀಡಾ ಕೂಟದಲ್ಲಿ ನಾಪೆÇೀಕ್ಲು ಹೋಬಳಿಯ 20 ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಕ್ಷಕಿ ಪವಿತ್ರ ಪ್ರಾರ್ಥನೆ, ಮುಖ್ಯ ಶಿಕ್ಷಕಿ ಜಾನಿರಾಣಿ ಸ್ವಾಗತ, ಶಿಕ್ಷಕಿ ಗಾಯತ್ರಿ ನಿರೂಪಿಸಿ, ದೈಹಿಕ ಶಿಕ್ಷಕ ಸುಬ್ರಮಣಿ ವಂದಿಸಿದರು.