ಸೋಮವಾರಪೇಟೆ, ಮೇ 5: ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಲ್ಲಿನ ಜಾನಕಿ ಕನ್ವೆನ್ಷನ್ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.
ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶಗಳ ಅಧ್ಯಯನ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರದ ಕುರಿತು ತಾ. 6ರಂದು (ಇಂದು) ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳಾದ ಮೀರ್ ಅನೀಸ್ ಅಹಮ್ಮದ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಜಿ.ಪಂ. ಸದಸ್ಯರು, ಗ್ರಾ.ಪಂ. ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಕುಡಿಯುವ ನೀರು ಉಪ ವಿಭಾಗದ ಇಂಜಿನಿಯರ್ಗಳು ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಚಂದ್ರಶೇಖರ್ ತಿಳಿಸಿದ್ದಾರೆ.