ಶನಿವಾರಸಂತೆ, ಮೇ 8: ಶನಿವಾರಸಂತೆ ವ್ಯಾಪ್ತಿಯ ಗುಂಡೂರಾವ್ ಬಡಾವಣೆಯ ರಸ್ತೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ರೂ. 2 ಲಕ್ಷ ವೆಚ್ಚದಲ್ಲಿ ಚರಂಡಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಗುಂಡೂರಾವ್ ಬಡಾವಣೆಯ ನಿವಾಸಿ, ಮಲ್ಲಿಕ ಅವರ ಮನೆಯಿಂದ ಕೂರ್ಗ್ ರೆಸ್ಟೋರೆಂಟ್‍ವರೆಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ರೂ. 2 ಲಕ್ಷ ವೆಚ್ಚದಲ್ಲಿ ಚರಂಡಿ ನಿರ್ಮಾಣ ಕಾರ್ಯಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಗೌಸ್ ಅವರು ಭೂಮಿ ಪೂಜೆ ನೆರವೇರಿಸಿದರು. ಪಂಚಾಯಿತಿ ಸದಸ್ಯರುಗಳಾದ ಸರ್ದಾರ್ ಅಹ್ಮದ್, ರಜನಿ, ಕಾರ್ಯದರ್ಶಿ ತಮ್ಮಯ್ಯಚಾರಿ, ಕಂಪ್ಯೂಟರ್ ನಿರ್ವಾಹಕಿ ಫೌಜಿಯಾ, ಸನಾಧಿ ಹಾಗೂ ಬಡಾವಣೆ ನಿವಾಸಿಗಳು ಹಾಜರಿದ್ದರು.