ವೀರಾಜಪೇಟೆ. ಫೆ. 4: ಶಿಕ್ಷಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿ ಮಾಡಿದ್ದು ವಿದ್ಯಾರ್ಥಿಗಳು ಸಿಗುವಂತಹ ಸೌಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು ಹೆಚ್ಚಿನ ವಿದ್ಯಾಭ್ಯಾಸ ವನ್ನು ಕಲಿಯುವಂತಾಗಬೇಕು ಎಂದು ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮೂಕೊಂಡ ಶಶಿ ಸುಬ್ರಮಣಿ ಹೇಳಿದರು.
ವೀರಾಜಪೇಟೆ ಸಮೀಪದ ಬೇಟೋಳಿ ಗುಂಡಿಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡೋತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪೋಷಕರು ತಮ್ಮ ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳಾಗುವಂತೆ ಮಾಡಬೇಕು. ಶಿಕ್ಷಕರುಗಳು ಪಾಠದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದವರು ಇಂದು ಉನ್ನತ ಹುದ್ದೆಯಲ್ಲಿದ್ದಾರೆ. ಇತ್ತೀಚೆಗೆ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಫÀಲಿತಾಂಶ ಬರುವದರೊಂದಿಗೆ ವಿದ್ಯಾರ್ಥಿಗಳು ರಾಜ್ಯ-ರಾಷ್ಟ್ರ ಮಟ್ಟದಲ್ಲಿಯು ಭಾಗವಹಿಸುತ್ತಿದ್ದಾರೆ ಎಂದರು.
ಬೇಟೋಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಅಮ್ಮಣಕುಟ್ಟಂಡ ವಸಂತ ಕಟ್ಟಿ ಅವರು ಕ್ರೀಡೋತ್ಸವದ ಕ್ರೀಡಾ ಜ್ಯೋತಿಯನ್ನು ಉದ್ಘಾಟಿಸಿ ಕ್ರೀಡೆಯೊಂದಿಗೆ ಶಿಸ್ತನ್ನು ಮೈಗೂಡಿಸಿಕೊಂಡಲ್ಲಿ ವಿದ್ಯಾರ್ಥಿ ಜೀವನ ಸಾರ್ಥಕ ಎಂದರು. ವೀರಾಜಪೇಟೆ ಕಾವೇರಿ ಕಾಲೇಜಿನ ಉಪನ್ಯಾಸಕ ಅಮ್ಮಣಿಚಂಡ ಪ್ರವೀಣ್ ಚಂಗಪ್ಪ ಗಣರಾಜೋತ್ಸವ ಮಹತ್ವದ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿದ್ದ ತಾಲೂಕು ಪಂಚಾಯಿತಿ ಸದಸ್ಯರಾದ ಮಾಳೇಟಿರ ಪ್ರಶಾಂತ್ ಉತ್ತಪ್ಪ, ಬಿ.ಎಂ.ಗಣೇಶ್, ಬೇಟೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಿ.ಬಿ. ಚೋಂದಮ್ಮ ಮಾತನಾಡಿದರು. ಗ್ರಾ.ಪಂ. ಸದಸ್ಯರಾದ ಉಮ್ಮರುಲ್ ಫಾರುಕ್, ಶೀಲಾಮಣಿ, ಲಾವಣ್ಯ, ಹಾಗೂ ಜಮಾಅತ್ ಅಧ್ಯಕ್ಷ ಎಂ.ಎ. ಅಬ್ಬಾಸ್, ಮಹಮ್ಮದ್ ಹಾಜಿ, ಉಬೈದುಲ್ಲಾ, ಎಂ.ಎಸ್. ಉಮ್ಮರ್, ಸಂಪನ್ಮೂಲ ವ್ಯಕ್ತಿ ವೆಂಕಟೇಶ್, ಮುಂತಾದವರು ಉಪಸ್ಥಿತರಿದ್ದರು.
ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಎಂ.ಎಂ. ಇಸ್ಮಾಯಿಲ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಇತ್ತೀಚೆಗೆ ಬಾಗಲ ಕೋಟೆಯಲ್ಲಿ ನಡೆದ ರಾಜ್ಯಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ 200 ಮೀಟರ್ ಓಟದಲ್ಲಿ 5ನೇ ಸ್ಥಾನ ಪಡೆದ ವಿದ್ಯಾರ್ಥಿ ಉಮ್ಮು ಆನಿಯಾ ಅವರನ್ನು ಸಭೆಯಲ್ಲಿ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಮುಖ್ಯ ಶಿಕ್ಷಕಿ ಹೆಚ್.ಸಿ. ಸೀತಾ ಸ್ವಾಗತಿಸಿ, ಶಿಕ್ಷಕಿ ಸುಜಾತ ವರದಿ ಓದಿದರೆ, ಶಿಕ್ಷಕ ಅಣ್ಣಪ್ಪ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಕವಾಯತು ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.