ಒಡೆಯನಪುರ, ಫೆ. 4: ‘ಪೋಷಕರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕಾರಯುತ ಮೌಲ್ಯಗಳನ್ನು ಕಲಿಸಿಕೊಡಬೇಕು’ ಎಂದು ಜಿ.ಪಂ.ಸದಸ್ಯೆ ಸರೋಜಮ್ಮ ಅಭಿಪ್ರಾಯಪಟ್ಟರು.ಸಮೀಪದ ಅಂಕನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಮಾಜಿ ಜಿ.ಪಂ. ಸದಸ್ಯ ಡಿ.ಬಿ. ಧರ್ಮಪ್ಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸರಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವದು ಬೇಸರದ ವಿಷಯವಾಗಿದೆ.

ಸರಕಾರಿ ಶಾಲಾ-ಕಾಲೇಜುಗಳಲ್ಲಿಯೂ ಸಕಲ ಸವಲತ್ತುಗಳ ಜೊತೆಯಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ, ಆದರೂ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿ ರುವದು ಒಳ್ಳೆಯ ಬೆಳವಣಿಗೆಯಲ್ಲ ಎಂದು ವಿಷಾಧಿಸಿದರು,

ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಿ.ಎಂ.ಹೇಮಂತ್ ಮಾತನಾಡಿ ಮೌಢ್ಯಗಳನ್ನು ಹೋಗಲಾಡಿಸ ಬೇಕಾದರೆ ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕು. ವಿದ್ಯಾರ್ಥಿ ಗಳು ಕೇವಲ ವಿದ್ಯಾವಂತರಾದರೆ ಸಾಲದು, ಇದರ ಜೊತೆಯಲ್ಲಿ ಸಮಾಜವನ್ನು ಜಾಗೃತಿ ಗೊಳಿಸುವಂತಹ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು, ವಿದ್ಯಾರ್ಥಿ ಗಳು ತಮ್ಮ ಭವಿಷ್ಯವನ್ನು ತಾನೇ ರೂಪಿಸಿಕೊಳ್ಳುವಷ್ಟು ಸ್ವಾಭಿಮಾನ ವನ್ನು ಬೆಳೆಸಿಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ತಾ.ಪಂ. ಸದಸ್ಯೆ ಲೀಲಾವತಿ ಮಹೇಶ್, ಆರ್‍ಎಂಸಿ ಸದಸ್ಯೆ ಶಿವಮಣಿ, ಗ್ರಾ.ಪಂ. ಸದಸ್ಯೆ ಶಶಿಕಲಾ, ಎಸ್‍ಡಿಎಂಸಿ ಅಧ್ಯಕ್ಷ ಕೆ.ಪಿ. ನಾಗೇಶ್, ಶಾಲಾ ಮುಖ್ಯ ಶಿಕ್ಷಕಿ ಪಿ.ಕೆ. ಸಾವಿತ್ರಿ, ಪ್ರಮುಖರಾದ ಜಿ.ಎಂ. ಅಶೋಕ್, ಎ.ಎಸ್. ವಸಂತ್, ಬಿ.ಎ. ಪ್ರಕಾಶ್, ಪಿ.ಟಿ. ವಿಲಿಯಮ್, ಎ.ಎನ್. ತ್ಯಾಗರಾಜ್ ಮುಂತಾದವರಿದ್ದರು.