ಮಡಿಕೇರಿ, ಫೆ. 5: ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನಗರದ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ಶಾಲೆ ಸಮಗ್ರ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ರೋಲಿಂಗ್ ಟ್ರೋಫಿ ತನ್ನದಾಗಿಸಿಕೊಂಡಿದೆ.ದಿ. ರೊಟೇರಿಯನ್ ಮಧು ಮಾದಪ್ಪ ಸ್ಮರಣಾರ್ಥ ಜಿಲ್ಲಾ ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಕೊಡಗು ಬ್ಯಾಡ್ಮಿಂಟನ್ ಅಸೋಸಿಯೇಷನ್, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ರೋಟರಿ ಕ್ಲಬ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.ಜಿಲ್ಲೆಯ 15 ಶಾಲೆಗಳಿಂದ ಸುಮಾರು 150 ವಿದ್ಯಾರ್ಥಿಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮೂಡಾ ಅಧ್ಯಕ್ಷ ಚುಮ್ಮಿ ದೇವಯ್ಯ, ನಗರಸಭಾ ಸದಸ್ಯರಾದ ಪಿ.ಡಿ. ಪೊನ್ನಪ್ಪ, ಅನಿತಾ ಪೂವಯ್ಯ, ಕೊಡಗು ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಡಾ. ಮೋಹನ್ ಅಪ್ಪಾಜಿ, ರೊ. ಕಾರ್ಯಪ್ಪ, ರೊ. ಮಂದಣ್ಣ, ದಿ. ಮಧು ಮಾದಪ್ಪ ಅವರ ಪತ್ನಿ ಬೊಳ್ಳುಮಾದಪ್ಪ ಅವರ ಉಪಸ್ಥಿತಿಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.