ನಾಪೆÇೀಕ್ಲು, ಫೆ. 5: ನಾಪೆÇೀಕ್ಲು ಪೆಟ್ರೋಲ್ ಬಂಕ್‍ನಿಂದ ಹಳೇ ತಾಲೂಕು ವರೆಗಿನ ಮುಖ್ಯರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರ ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಸಂಬಂಧಪಟ್ಟವರು ಕೂಡಲೇ ರಸ್ತೆ ಸರಿಪಡಿಸಲು ಕ್ರಮಕೈಗೊಳ್ಳದಿದ್ದರೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವದೆಂದು ಮಾನವ ಹಕ್ಕು ಆಯೋಗ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಜಿಲ್ಲಾಧ್ಯಕ್ಷ, ಮಡಿಕೇರಿ ತಾಲೂಕು ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಬಿದ್ದಾಟಂಡ ಜಿನ್ನು ನಾಣಯ್ಯ ಎಚ್ಚರಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಅವರು ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ವಾಹನ ಸಂಚಾರ ದುಸ್ತರ ಎಂಬಂತಾಗಿದೆ. ರಸ್ತೆಯಲ್ಲಿ ನಡೆದಾಡಲು ಸಾಧ್ಯವಿಲ್ಲದಾಗಿದೆ. ಸ್ಥಳೀಯ ಜನ ಪ್ರತಿನಿಧಿಗಳು ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ. ಆದುದರಿಂದ ಸಂಬಂಧಪಟ್ಟವರು ಮುಂದಿನ 10 ದಿನಗಳ ಒಳಗೆ ಸರಿಪಡಿಸಲು ಕ್ರಮಕೈಗೊಳ್ಳದಿದ್ದರೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ರಸ್ತೆ ತಡೆ ನಡೆಸಿ ಪ್ರತಿಭಟಿಸ ಲಾಗುವದು ಎಂದು ಎಚ್ಚರಿಸಿದರು.