ಸೋಮವಾರಪೇಟೆ, ಫೆ. 6: ಸಂಘಟನೆಗಳು ಕಾನೂನಿನ ಚೌಕಟ್ಟಿನೊಳಗೆ ಹೋರಾಟ ನಡೆಸಿದರೆ ಮಾತ್ರ ಉತ್ತಮ ಪ್ರತಿಫಲ ನಿರೀಕ್ಷಿಸಲು ಸಾಧ್ಯ ಎಂದು ಜಿಲ್ಲಾ ಪ್ರಜಾರಂಗದ ಅಧ್ಯಕ್ಷ ಹಾಗೂ ವಕೀಲರ ಸಂಘದ ಉಪಾಧ್ಯಕ್ಷ ಕಾಟ್ನಮನೆ ವಿಠಲ್‍ಗೌಡ ಹೇಳಿದರು.ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ವತಿಯಿಂದ ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ 7ನೇ ವರ್ಷದ ತಾಲೂಕು ಸಮಾವೇಶ ಹಾಗೂ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಕನ್ನಡ ಪರ ಸಂಘಟನೆಗಳು ನಾಡು-ನುಡಿ, ದೇಶ, ಭಾಷೆಯ ರಕ್ಷಣೆಯೊಂದಿಗೆ ಇತ್ತೀಚಿನ ದಿನಗಳಲ್ಲಿ ಸಮಾಜಸೇವೆ ಅಥವಾ ಮಕ್ಕಳ ಪ್ರತಿಭೆಯನ್ನು ಗುರುತಿಸುವಂತಹ ವೇದಿಕೆಯನ್ನು ಕಲ್ಪಿಸುತ್ತಿರುವದು ಶ್ಲಾಘನೀಯ ಎಂದರು.
ರಕ್ಷಣಾ ವೇದಿಕೆಯ ಸಾಹಿತ್ಯ ಘಟಕದ ಅಧ್ಯಕ್ಷ ಕೆ.ಪಿ. ಸುದÀರ್ಶನ್ ಸಂಘದ ಮುಂದಿನ ಕಾರ್ಯ ಚಟುವಟಿಕೆ ಕುರಿತು ಮಾತನಾಡಿ ದರು. ಅಧ್ಯಕ್ಷತೆಯನ್ನು ನಗರ ಘಟಕದ ಅಧ್ಯಕ್ಷ ಬಿ.ಎಸ್. ಮಂಜುನಾಥ್ ವಹಿಸಿದ್ದರು. ವೇದಿಕೆಯಲ್ಲಿ ತಾಲೂಕು ಅಧ್ಯಕ್ಷ ದೀಪಕ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಈರಪ್ಪ, ಇಂದಿರಾ ಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ. ನಾಗರಾಜು, ತಾಲೂಕು ಮೊಗೇರ ಸಂಘದ ಅಧ್ಯಕ್ಷ ದಾಮೋದÀರ್, ರಕ್ಷಣಾ ವೇದಿಕೆ ಪದಾಧಿಕಾರಿಗಳಾದ ಕೆ.ಪಿ. ರವೀಶ್, ಎಚ್.ಬಿ. ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.