ಮಡಿಕೇರಿ, ಫೆ. 7: ವೀರಾಜಪೇಟೆ ಕಾವೇರಿ ಪದವಿ ಕಾಲೇಜು ವೀರಾಜಪೇಟೆಯಲ್ಲಿ ತಾ. 9 ರಂದು ರಕ್ತ ದಾನ ಮತ್ತು ರಕ್ತ ಗುಂಪು ವರ್ಗೀಕರಣ ಶಿಬಿರವನ್ನು ಏರ್ಪಡಿಸಲಾಗಿದೆ. ಕಾವೇರಿ ಪದವಿ ಕಾಲೇಜು, ರೆಡ್ ರಿಬ್ಬನ್ ಕ್ಲಬ್, ರೆಡ್ ಕ್ರಾಸ್, ಕಾಲೇಜಿನ ರಾಷ್ಟ್ರೀಯಾ ಸೇವಾ ಯೋಜನಾ ಘಟಕ ಹಾಗೂ ರೋಟರಿ ಕ್ಲಬ್ ವೀರಾಜಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಶಿಬಿರÀವನ್ನು ಬೆಳಿಗ್ಗೆ 10 ಗಂಟೆಯಿಂದ ಅಪರಾಹ್ನ 3 ಗಂಟೆವರೆಗೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.