ಮಡಿಕೇರಿ, ಫೆ. 8: ಎರಡನೇ ಬಾರಿಗೆ ಮಡಿಕೇರಿ ನಗರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ, ಕೂಡಕಂಡಿ ಕಾವೇರಮ್ಮ ಸೋಮಣ್ಣ ಅವರನ್ನು ಕೊಡಗು ಗೌಡ ಮಹಿಳಾ ಒಕ್ಕೂಟದಿಂದ ಸನ್ಮಾನಿಸಲಾಯಿತು. ಒಕ್ಕೂಟದ ಕಚೇರಿಯಲ್ಲಿ ಅಧ್ಯಕ್ಷೆ ಕುಂಜಿಲನ ಮುತ್ತಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು ಸನ್ಮಾನಿಸಿದರು.