ಗೋಣಿಕೊಪ್ಪಲು, ಫೆ. 8: ಬಲ್ಯಮುಂಡೂರು ಗ್ರಾಮ ಪಂಚಾಯ್ತಿ ವತಿಯಿಂದ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆ ತಾ. 10ರಂದು ಬೆಳಿಗ್ಗೆ 11 ಗಂಟೆಗೆ ಪಂಚಾಯ್ತಿ ಅಧ್ಯಕ್ಷ ಕೊಟ್ಟಂಗಡ ಪ್ರಕಾಶ್ ಅಧ್ಯಕ್ಷತೆಯಲ್ಲಿ ತೂಚಮಕೇರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.

ಸಭೆಯಲ್ಲಿ ಮಕ್ಕಳ ಹಕ್ಕು, ಮಹಿಳೆಯರ ಪಾತ್ರ ವಿಷಯ ಸೇರಿದಂತೆ ಇನ್ನಿತರ ವಿಚಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ವಿಚಾರ ಮಂಡನೆ ಮಾಡಲಿದ್ದಾರೆ ಎಂದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಕಳ್ಳಿಚಂಡ ಪೂಣಚ್ಚ ತಿಳಿಸಿದ್ದಾರೆ.