ಕೂಡಿಗೆ, ಫೆ. 8: ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುದುಗೂರು ಶ್ರೀ ಕಾಳಿಕಾಂಭ ಯುವಕ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಸಂಘದ ವತಿಯಿಂದ ವಾಲಿಬಾಲ್, ಥ್ರೋಬಾಲ್, ಕಬಡ್ಡಿ ಕ್ರೀಡಾ ಕೂಟಗಳನ್ನು ಏರ್ಪಡಿಸಲಾಗಿತ್ತು.

ಕ್ರೀಡಾಕೂಟಕ್ಕೆ ಉಮಾಮಹೇಶ್ವರ ದೇವಾಲಯ ಸಮಿತಿಯ ಟಿ.ಎಂ. ಚಾಮಿ ಚಾಲನೆ ನೀಡಿದರು.

ವಾಲಿಬಾಲ್ ಪಂದ್ಯಾಟದಲ್ಲಿ ಕಣಗಾಲ್ ಬಸವನಹಳ್ಳಿ ತಂಡ ಪ್ರಥಮ ಸ್ಥಾನ ಹಾಗೂ ಕಾಳಿಕಾಂಭ (ಹಾಸನ) ದ್ವಿತೀಯ ಸ್ಥಾನ ಪಡೆದವು.

ಮಹಿಳೆಯರ ಥ್ರೋಬಾಲ್‍ನಲ್ಲಿ ಮದೆನಾಡು ಫ್ರೆಂಡ್ಸ್ ಪ್ರಥಮ, ಸೀಗೆಹೊಸೂರು ತಂಡ ದ್ವಿತೀಯ ಸ್ಥಾನ ಪಡೆದವು. ಪುರುಷರ ಕಬಡ್ಡಿ ಪಂದ್ಯಾಟದಲ್ಲಿ ಕುಶಾಲನಗರ ಜೆಬಿಎಸ್‍ಸಿ ಪ್ರಥಮ, ನಂಜರಾಯಪಟ್ಟಣ ಎನ್‍ವೈಸಿ ದ್ವಿತೀಯ ಸ್ಥಾನ ಗಳಿಸಿತು.

ಈ ಸಂದರ್ಭ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿ ಗಳಿಗೂ ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಯುವಕ ಸಂಘದ ಅಧ್ಯಕ್ಷ ಕೆ.ಪಿ. ಗಿರೀಶ್ ವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ನಂತರ ವಿಶ್ವಸಂಸ್ಥೆಯ ಶಾಂತಿ ಪಾಲನ ಪಡೆಯಲ್ಲಿ ದಕ್ಷಿಣ ಆಫ್ರಿಕಾದ ಸೂಡನ್‍ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಮಾಜಿ ಸೈನಿಕ ಡಿ.ಬಿ. ಜಯರಾಂ ಅವರನ್ನು ಸನ್ಮಾನಿಸ ಲಾಯಿತು. ಅಲ್ಲದೆ, ಕಬಡ್ಡಿಯ ಹಿರಿಯ ಆಟಗಾರರಾದ ಮೊಣ್ಣಯ್ಯ, ಪೇದ್ರೂ ರವರನ್ನು ಸನ್ಮಾನಿಸಲಾಯಿತು.

ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ, ನೀರು ಬಳಕೆದಾರರ ಸಂಘದ ಅಧ್ಯಕ್ಷ ಐ.ಎಸ್. ಗಣೇಶ್, ಕೂಡಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶೋಭಾ ಪುಟ್ಟಪ್ಪ, ಸದಸ್ಯರಾದ ಹೆಚ್.ಎಸ್. ರವಿ, ಕಾಳಿಕಾಂಭ ಯುವಕ ಸಂಘದ ಮಾಜಿ ಅಧ್ಯಕ್ಷ ಕುಮಾರಪ್ಪ. ಬಿ.ಎಲ್. ಸುರೇಶ್, ಎಸ್.ಸಿ. ಪ್ರವೀಣ್ ಸೇರಿದಂತೆ ಸಂಘದ ನಿರ್ದೇಶಕರು ಇದ್ದರು.

ವೇದಿಕೆಯಲ್ಲಿದ್ದ ಗಣ್ಯರು ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಫಿಗಳನ್ನು ನೀಡಿದರು. ನಂತರ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.