ವೀರಾಜಪೇಟೆ, ಫೆ. 9: ಕೋತೂರು ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದಿಂದ ಕೋತೂರು ಗ್ರಾಮದ ಮದೇಶ್ವರ ದೇವಸ್ಥಾನದಲ್ಲಿ ತಾ. 11 ರಂದು ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಸ್ಥಾಪಕ ಅಧ್ಯಕ್ಷ ಕೆ.ಆರ್. ಸುರೇಶ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುರೇಶ್, ಅಂದು ಬೆಳಿಗ್ಗೆ 10.30 ಗಂಟೆಗೆ ಆರಂಭವಾಗುವ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸುವ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಆದಿ ಚುಂಚನಗಿರಿಯ ಶಂಭುನಾಥ ಮಹಾ ಸ್ವಾಮೀಜಿ ದಿವ್ಯ ಸಮ್ಮುಖದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಲಿದೆ.

ಜೆ.ಡಿಎಸ್. ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಂಡ್ಯದ ಸಂಸದ ಸಿ.ಎಸ್. ಪುಟ್ಟರಾಜು, ಶಾಸಕರುಗಳಾದ ಕೆ.ಜಿ. ಬೋಪಯ್ಯ, ಜಿ.ಟಿ. ದೇವೇಗೌಡ, ಮಾಜಿ ಸಚಿವ ಜೀವಿಜಯ ಹಾಗೂ ಕಾರ್ಮಾಡು ಗ್ರಾಮದ ಕಾಫಿ ಬೆಳೆಗಾರ ವಿ.ಎಸ್. ಸುಬ್ರಮಣಿ ಭಾಗವಹಿಸಲಿದ್ದಾರೆ ಎಂದರು.

ಸಂಘದ ಅಧ್ಯಕ್ಷ ವಿ.ಎಸ್. ಪ್ರಭು ಮಾತನಾಡಿ, ಕೆ.ಆರ್. ಸುರೇಶ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಸಮಾರಂಭದಲ್ಲಿ ಸಂಘದ ಹಿರಿಯ ಸದಸ್ಯರುಗಳನ್ನು ಸನ್ಮಾನಿಸಿ, ಗೌರವಿಸಲಾಗುವದು.