ಶನಿವಾರಸಂತೆ, ಫೆ. 10: ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಆಡಳಿತ ವೈದ್ಯಾಧಿಕಾರಿಗಳಾದ ಡಾ. ಹೆಚ್.ಎಸ್. ಶಿವಪ್ರಸಾದ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸರ್ಜನ್ ಡಾ. ಗಿರೀಶ್, ದಂತ ವೈದ್ಯ ಡಾ. ಬಿಪಿಲ್ ಜೋಸ್, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಶುಕ್ಲಾಂಭರ, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.