ಸೋಮವಾರಪೇಟೆ, ಫೆ. 11: ಉತ್ತರ ಕೊಡಗು ಭಾಗದ ಜನತೆಯ ಹಲವು ದಶಕಗಳ ಬೇಡಿಕೆಯಾಗಿದ್ದ ಕೊಡಗು-ಹಾಸನ ಜಿಲ್ಲೆ ಸಂಪರ್ಕಿಸುವ ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಮುಕ್ತಾಯ ಹಂತ ತಲಪಿದೆ. ರೂ. 25 ಹಾಗೂ 28 ಕೋಟಿ ವೆಚ್ಚದಲ್ಲಿ ಹೇಮಾವತಿ ನದಿಗೆ ಅಡ್ಡಲಾಗಿ ಕಾವೇರಿ ನೀರಾವರಿ ನಿಗಮದ ವತಿಯಿಂದ ನಿರ್ಮಿಸಲಾಗುತ್ತಿರುವ ಎರಡು ಸೇತುವೆಗಳ ಕಾಮಗಾರಿಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಪರಿಶೀಲಿಸಿದರು.ಕಳೆದ 1999ರಲ್ಲಿಯೇ ತಾಲೂಕಿನ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಗೆ ಒಳಪಡುವ ಜನಾರ್ಧನಹಳ್ಳಿ ಸಮೀಪ ಹಾಸನ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಕಾವೇರಿ ನೀರಾವರಿ ನಿಗಮದ ಆಶ್ರಯದಲ್ಲಿ ಸೇತುವೆ ನಿರ್ಮಾಣ ಕಾರ್ಯ ಕೈಗೊಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯ ಅರ್ಜಿ ಸಮಿತಿಯ ಅಧ್ಯಕ್ಷರಾಗಿದ್ದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರಿಗೆ ಈ ಬಗ್ಗೆ ಮನವರಿಕೆ ಮಾಡಿಕೊಟ್ಟ ಸಂದರ್ಭ, ಗಮನಹರಿಸಿದ ಅಪ್ಪಚ್ಚು ರಂಜನ್ ಅವರು ರಾಜ್ಯ ಅರ್ಜಿ ಸಮಿತಿ ಸದಸ್ಯರೊಂದಿಗೆ ಸ್ಥಳ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಅನುದಾನ ಒದಗಿಸಿದ ಮೇರೆ ರೂ. 25 ಕೋಟಿ ವೆಚ್ಚದಲ್ಲಿ ಈ ಸೇತುವೆ ನಿರ್ಮಾಣಗೊಳ್ಳುತ್ತಿದೆ.
ಇದರೊಂದಿಗೆ ಕೊಡ್ಲಿಪೇಟೆಯ ಹಂಪಾಪುರ ಗ್ರಾಮದಿಂದ ಹಾಸನ ಜಿಲ್ಲೆ ಸಂಪರ್ಕಿಸಲು ಹೇಮಾವತಿ ನದಿಗೆ ರೂ. 28 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿಯೂ ಅಂತಿಮ ಹಂತದಲ್ಲಿದ್ದು ಶಾಸಕ ಎಂ.ಪಿ. ಳ್ಳಲಾಗಿತ್ತು. ಆದರೆ ಅನುದಾನದ ಕೊರತೆಯಿಂದಾಗಿ ಸೇತುವೆ ಕಾಮಗಾರಿ ಅಂತಿಮ ಹಂತ ತಲುಪದೇ ಸ್ಥಗಿತಗೊಂಡಿತ್ತು.
ಅಪ್ಪಚ್ಚು ರಂಜನ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಡಗು ಹಾಗೂ ಹಾಸನ ಜಿಲ್ಲೆ ಸಂಪರ್ಕಿಸಲು ಕೊಡ್ಲಿಪೇಟೆ ಸಮೀಪ ಹೇಮಾವತಿ ನದಿಗೆ ಸೇತುವೆ ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಅದರಂತೆ ಅನುದಾನ ಬಿಡುಗಡೆಗೊಳಿಸಿದ ಮೇರೆ ಕಾಮಗಾರಿಗಳು ನಡೆಯುತ್ತಿವೆ. ಈ ಸೇತುವೆ ನಿರ್ಮಾಣದಿಂದ ಕೊಡ್ಲಿಪೇಟೆ ಮಾರ್ಗವಾಗಿ ಹಾಸನಕ್ಕೆ ತೆರಳಲು ಸುಮಾರು 10 ಕಿ.ಮೀ. ಕಡಿಮೆಯಾಗಲಿದೆ. ಇದರೊಂದಿಗೆ ಈ ಭಾಗದ ಸಾರ್ವಜನಿಕರ ಹಲವು ದಶಕಗಳ ಬೇಡಿಕೆಯೂ ಈಡೇರಿದಂತಾಗುತ್ತದೆ ಎಂದು ಶಾಸಕರು ತಿಳಿಸಿದರು.