ಸೋಮವಾರಪೇಟೆ, ಫೆ. 11: ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಆಸ್ತಿಯಾಗಿದ್ದು, ಎದುರಿಗಿರುವ ನಿಜವಾದ ದೇವರುಗಳು ಎಂದು ಮೂಡಬಿದಿರೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಯುವರಾಜ್ ಹೇಳಿದರು.ಪಟ್ಟಣದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ, ಪಟ್ಟಣದ ವಿವಿಧ ಶಾಲೆಗಳ ಹತ್ತನೆ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಪರೀಕ್ಷೆಗೆ ಸಿದ್ಧತೆ’ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆಯ ಮೆಟ್ಟಿಲೇರಬೇಕು. ಭಯ, ಸೋಮಾರಿತನ, ಅಶಿಸ್ತುವಿನಿಂದ ದೂರವಿರಬೇಕು. ಆತ್ಮವಿಶ್ವಾಸ, ಶಿಸ್ತು, ಕಲಿಕೆಯೊಂದಿಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಪದಾಧಿಕಾರಿಗಳಾದ ಲಿಂಗರಾಜು, ರೇಣುಕ, ನಂದಕುಮಾರ್, ಪ್ರಕಾಶ್, ಶಿಕ್ಷಣ ಇಲಾಖೆಯ ರಾಮಚಂದ್ರ ಮೂರ್ತಿ, ಬಿಟಿಸಿಜಿ ಪಿಯು ಕಾಲೇಜಿನ ಪಾಂಶುಪಾಲ ಬಾಲಕೃಷ್ಣ, ಮುಖ್ಯ ಶಿಕ್ಷಕಿ ಮಿಲ್ಗ್ರೆಡ್ ಗೋನ್ಸಾಲ್ವೆಸ್ ಇದ್ದರು.