ಕುಶಾಲನಗರ, ಫೆ. 13: ಕರ್ನಾಟಕ ಜಾನಪದ ಪರಿಷತ್ ವತಿಯಿಂದ ನೀಡಲಾಗುವ ರಾಜ್ಯ ಜಾನಪದ ಲೋಕ ಪ್ರಶಸ್ತಿಗೆ ಭಾಜನರಾದ ಕುಶಾಲನಗರದ ಬಾಚರಣಿಯಂಡ ಪಿ.ಅಪ್ಪಣ್ಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ಜಾನಪದ ಪರಿಷತ್, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ರಾಮನಗರದ ಜಾನಪದ ಲೋಕ ಸಭಾಂಗಣದಲ್ಲಿ 3 ದಿನಗಳ ಕಾಲ ನಡೆದ ಪ್ರವಾಸಿ ಮಹಿಳಾ ಜಾನಪದ ಲೋಕೋತ್ಸವ-2017ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯದ ಒಟ್ಟು 32 ಜನಪದ ಕಲಾವಿದರಿಗೆ ಪ್ರಶಸ್ತಿ ವಿತರಿಸಲಾಯಿತು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊಡಗು ಜಿಲ್ಲೆಯಿಂದ ಆಯ್ಕೆಯಾದ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷÀ ಹಾಗೂ ಹಿರಿಯ ಜನಪದ ಸಾಹಿತಿ ಬಾಚರಣಿಯಂಡ ಪಿ ಅಪ್ಪಣ್ಣ ಅವರಿಗೆ ಪ್ರಶಸ್ತಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾವೇರಿ ಕಲಾವೃಂದದ ಯುವತಿಯರ ತಂಡದಿಂದ ಉಮ್ಮತ್ತಾಟ್ ಪ್ರದರ್ಶನ ನಡೆಯಿತು.
ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಟಿ. ತಿಮ್ಮೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶಾಖಾ ಮಠಾಧೀಶರಾದ ಶ್ರೀ ಅನ್ನದಾನೇಶ್ವರ ಸ್ವಾಮೀಜಿ, ಶ್ರೀ ಸೋಮನಾಥ ಸ್ವಾಮೀಜಿ, ಮ್ಯಾನೇಜಿಂಗ್ ಟ್ರಸ್ಟಿ ಇಂದಿರಾ ಬಾಲಕೃಷ್ಣ, ಗೌರವ ಕಾರ್ಯದರ್ಶಿ ಡಾ.ರಾಜೇಗೌಡ, ರಾಮನಗರ ಜಿಲ್ಲಾಧಿಕಾರಿ ಡಾ.ಮಮತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮೇಶ್, ಜನಪದ ಪರಿಷತ್ನ ಜಿಲ್ಲಾ ಉಪಾಧ್ಯಕ್ಷೆ ಐಮುಡಿಯಂಡ ರಾಣಿ ಮಾಚಯ್ಯ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ರಾಣು ಅಪ್ಪಣ್ಣ ಇದ್ದರು.