ಮಡಿಕೇರಿ, ಫೆ.12 : ಜಿಲ್ಲಾ ಕಾಂಗ್ರೆಸ್ ಸಮಿತಿಯ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವತಿಯಿಂದ ಕಾಂಗ್ರೆಸ್‍ನ ಜಿ.ಪಂ, ತಾ.ಪಂ, ನಗರಸಭೆ, ಪಟ್ಟಣ ಪಂಚಾಯಿತಿ ಸದಸ್ಯರಿಗೆ, ಚುನಾವಣೆಯಲ್ಲಿ ಪರಾಜಿತರಾದ ಅಭ್ಯರ್ಥಿಗಳಿಗೆ ಹಾಗೂ ಜಿ.ಪಂ ಕ್ಷೇತ್ರ ಸಂಘಟಕರಿಗೆ ಗ್ರಾಮ್ ಸ್ವರಾಜ್ ಜಾಗೃತಿ ಕಾರ್ಯಾಗಾರ ತಾ.13 ರಂದು (ಇಂದು) ನಡೆಯಲಿದೆ.

ನಗರದ ಕೆಳಗಿನ ಕೊಡವ ಸಮಾಜದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಾಗಾರವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದು, ಜಿಲ್ಲಾ ಕಾಂಗ್ರೆಸ್ ಪ್ರಬಾರ ಅಧ್ಯಕ್ಷ ಟಿ.ಪಿ. ರಮೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರುಗಳಾದ ಸುಮಾವಸಂತ್, ಹೆಚ್. ವಿಶ್ವನಾಥ್, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಆರ್‍ಜಿಪಿಆರ್‍ಎಸ್ ಸಂಘÀಟನೆಯ ರಾಜ್ಯ ಸಂಚಾಲಕ ಬಿ.ಎಂ. ಸಂದೀಪ್, ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಮಾಚಯ್ಯ, ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಕೊಲ್ಯದ ಗಿರೀಶ್, ಬಿಬಿಎಂಪಿ ಮಾಜಿ ಸದಸ್ಯ ಹರೀಶ್ ಬೋಪಣ್ಣ, 5 ಬ್ಲಾಕ್‍ಗಳ ಅಧ್ಯಕ್ಷರುಗಳಾದ ಕೆ.ಎಂ.ಲೋಕೇಶ್ ಕುಮಾರ್, ಕೆ.ಎಂ.ಗಣೇಶ್, ತೀತಿರ ಧರ್ಮಜ ಉತ್ತಪ್ಪ, ಬೇಕಲ್ ರಮಾನಾಥ್, ಆರ್.ಕೆ.ಅಬ್ದುಲ್ ಸಲಾಮ್ ಹಾಗೂ ಪಕ್ಷದ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾರ್ಯಾಗಾರದಲ್ಲಿ ನಾಲ್ಕು ಗೋಷ್ಠಿಗಳು ನಡೆಯಲಿದ್ದು, “ಅಧಿಕಾರ ವಿಕೇಂದ್ರೀಕರಣದಲ್ಲಿ ಕಾಂಗ್ರೆಸ್ ಪಾತ್ರ” ವಿಚಾರದ ಕುರಿತು ಆರ್‍ಜಿಪಿಆರ್‍ಎಸ್ ಸಂಘÀಟನೆಯ ರಾಜ್ಯ ಸಂಚಾಲಕ ಬಿ.ಎಂ. ಸಂದೀಪ್ ಮಾತನಾಡಲಿದ್ದಾರೆ. ಜಿಲ್ಲಾ ಪರಿಷತ್ ಮಾಜಿ ಸದಸ್ಯ ಜೆ.ಎ.ಕರುಂಬಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. “ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ ತಿದ್ದುಪಡಿಯ ಒಂದು ಪಕ್ಷಿ ನೋಟ”ದ ಕುರಿತು ಪಕ್ಷದ ಮುಖಂಡರು ಹಾಗೂ ಹಿರಿಯ ವಕೀಲರಾದ ಹೆಚ್.ಎಸ್.ಚಂದ್ರಮೌಳಿ ವಿವರಿಸಲಿದ್ದು, ಕೆಪಿಸಿಸಿಯ ಹಿರಿಯ ಮುಖಂಡ ಮಿಟ್ಟುಚಂಗಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

“ವಿಕೇಂದ್ರೀಕೃತ ಯೋಜನೆ ಮತ್ತು ಹಣಕಾಸು” ವಿಚಾರದ ಕುರಿತು ಪಕ್ಷದ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಲಿದ್ದು, ಜಿ.ಪಂ ಸದಸ್ಯೆ ಕೆ.ಪಿ.ಚಂದ್ರಕಲಾ ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾಮ ಮಟ್ಟದಲ್ಲಿ ಸಂವಾದ, ವಿಧಾನ, ವರದಿ ಮತ್ತು ಪರಿಶೀಲನೆ ಬಗ್ಗೆ ಮಾಜಿ ಸಂಸದ ನಾರಾಯಣ ಸ್ವಾಮಿ ಮಾತನಾಡಲಿದ್ದು, ಐಎನ್‍ಟಿಯುಸಿ ಯ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.