ಮಡಿಕೇರಿ, ಫೆ. 14: ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರು ತಾ. 16 ರಂದು (ನಾಳೆ) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಂದು ಬೆಳಿಗ್ಗೆ 11.30 ಗಂಟೆಗೆ ನಾಪೋಕ್ಲು ಬಳಿಯ ಮಕ್ಕಿ ದೇವಸ್ಥಾನ ರಸ್ತೆಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 12.30 ಗಂಟೆಗೆ ಇಗ್ಗುತಪ್ಪ ದೇವಸ್ಥಾನ ರಸ್ತೆಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ಸಂಪಾಜೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.