ಮಡಿಕೇರಿ, ಫೆ. 14: ಜಿಲ್ಲಾಡಳಿತ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಕೂಡಿಗೆ ಜರ್ಸಿತಳಿ ಸಂವರ್ಧನಾ ಕ್ಷೇತ್ರ ಇವರ ವತಿಯಿಂದ ತಾ. 17 ರಂದು ಬೆಳಿಗ್ಗೆ 11 ಗಂಟೆಗೆ ಸೋಮವಾರಪೇಟೆ ತಾಲೂಕು ಮದಲಾಪುರದ ಬ್ಯಾಡಗೊಟ್ಟ ಗ್ರಾಮದಲ್ಲಿ ಹಾಲು ಉತ್ಪಾದಕ ಮೇಕೆ ಸಾಕಾಣಿಕಾ ಘಟಕದ ಕಟ್ಟಡ ಶಂಕುಸ್ಥಾಪನಾ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮವು ಕೂಡಿಗೆಯಲ್ಲಿ ನಡೆಯಲಿದೆ.
ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವ ಎ. ಮಂಜು, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ, ವಿರೋಧ ಪಕ್ಷದ ಮುಖ್ಯ ಸಚೇತಕÀ ಕ್ಯಾಪ್ಟನ್ ಗಣೇಶ್ ಕಾರ್ನಿಕ್, ಜಿ.ಪಂ.ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ್ ಸಿಂಹ, ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್.ಮಂಜುಳ, ಸೋಮವಾರಪೇಟೆ ತಾ.ಪಂ. ಅಧ್ಯಕ್ಷೆ ಪುಷ್ಪ ರಾಜೇಶ್, ಉಪಾಧ್ಯಕ್ಷ ಅಭಿಮನ್ಯು ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ.