ಮಡಿಕೇರಿ, ಫೆ. 14 : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ಹಾಗೂ ನಬಾರ್ಡ್ ಸಹಯೋಗದೊಂದಿಗೆ ತಾ. 17 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕ್ರಿಸ್ಟಲ್ ಹಾಲ್‍ನಲ್ಲಿ ರುಪೇ ಕಾರ್ಡ್ ಬಿಡುಗಡೆ ಸಮಾರಂಭ ನಡೆಯಲಿದೆ. ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷ ಬಿ.ಡಿ. ಮಂಜುನಾಥ್, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‍ನ ಅಧ್ಯಕ್ಷ ಕೆ.ಎನ್. ರಾಜಣ್ಣ, ನಬಾರ್ಡ್‍ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಐ. ಗಾಣಗಿ, ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನಿಬಂಧಕ ಎಂ.ಕೆ. ಅಯ್ಯಪ್ಪ, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಎಸ್. ರಮಣರೆಡ್ಡಿ ಇತರರು ಪಾಲ್ಗೊಳ್ಳಲಿದ್ದಾರೆ.