ಮಡಿಕೇರಿ, ಫೆ. 16: ಕೊಡಗು ಜಿಲ್ಲೆಯ 03 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, 01 ಏಕಲವ್ಯ ಮಾದರಿ ವಸತಿ ಶಾಲೆ ಹಾಗೂ 01 ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6ನೇ ತರಗತಿಯ 2017-18ನೇ ಸಾಲಿನಲ್ಲಿ ಪ್ರವೇಶಾತಿಗೆ ತಾ. 19 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ನಿಗಧಿಪಡಿಸಿದ್ದ ಪರೀಕ್ಷೆಯನ್ನು ಕಾರಣಾಂತರದಿಂದ ಮಾರ್ಚ್, 5 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೋಮವಾರಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ವೀರಾಜಪೇಟೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ನಡೆಸಲಾಗುತ್ತಿದೆ. ಆದ್ದರಿಂದ ಈ ವಸತಿ ಶಾಲೆಗಳಿಗೆ 6ನೇ ತರಗತಿ ದಾಖಲಾತಿಗಾಗಿ ಅರ್ಜಿಯನ್ನು ಸಲ್ಲಿಸಿರುವ ವಿದ್ಯಾರ್ಥಿಗಳು ಪರೀಕ್ಷಾ ಪ್ರಕ್ರಿಯೆಗೆ ತಪ್ಪದೆ ಹಾಜರಾಗುವಂತೆ ತಿಳಿಸಿದೆ.

ಹೆಚ್ಚಿನ ವಿವರಗಳಿಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸುದರ್ಶನ ವೃತ್ತ, ತಾಲೂಕು ಪಂಚಾಯತ್ ಹಿಂಭಾಗ, ಮಡಿಕೇರಿ, ದೂರವಾಣಿ ಸಂಖ್ಯೆ: 08272-225531 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಯಾದೇವಿ ಗಲಗಲಿ ತಿಳಿಸಿದ್ದಾರೆ.