ಮಡಿಕೇರಿ, ಫೆ. 17: ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಗೆ ಚುನಾವಣೆ ಘೋಷಣೆಯಾಗಿದೆ. ಒಟ್ಟು 17 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ತಾ. 18ರಂದು (ಇಂದು) ಮಧ್ಯಾಹ್ನ 3 ಗಂಟೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ತಾ. 19ರಂದು ಪರಿಶೀಲನೆ ನಡೆಯಲಿದ್ದು, ತಾ. 20 ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ತಾ. 26ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಂಘದ ಕಟ್ಟಡದಲ್ಲಿ ಚುನಾವಣೆ ನಡೆಯಲಿದೆ. ನಂತರ ಮತ ಎಣಿಕೆ ಕಾರ್ಯ ನಡೆಯಲಿದ್ದು, ಸಂಜೆ ವೇಳೆಗೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣಾಧಿಕಾರಿ ಎಸ್.ಎಂ. ರಘು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.