ಡಾ. ಪುಷ್ಪಾ ಕುಟ್ಟಣ್ಣ
ಮೂರ್ನಾಡು, ಫೆ. 17: ದೇಶದ ಅಭಿವೃದ್ಧಿಯಲ್ಲಿ ವಿದ್ಯಾಸಂಸ್ಥೆಗಳ ಪಾತ್ರ ಮಹತ್ತರವಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯೆ ಡಾ. ಪುಷ್ಪ ಕುಟ್ಟಣ್ಣ ಹೇಳಿದರು.
ಮೂರ್ನಾಡು ವಿದ್ಯಾಸಂಸ್ಥೆಯ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಪ್ರತಿಭಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪಾಠ-ಪ್ರವಚನಗಳೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಮಾತ್ರ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹೊಂದಲು ಸಾಧ್ಯ ಎಂದರು.
ವಿದ್ಯಾಸಂಸ್ಥೆ ನಿರ್ದೇಶಕ ಬಡುವಂಡ ಸುಬ್ರಮಣಿ ಅಧ್ಯಕ್ಷತೆ ವಹಿಸಿದ್ದರು. ಮೂರ್ನಾಡು ಚೇಂಬರ್ ಆಫ್ ಕಾಮರ್ಸ್ ಸ್ಥಾನೀಯ ಸಮಿತಿ ಅಧ್ಯಕ್ಷ ಬಡುವಂಡ ಅರುಣ್ ಅಪ್ಪಚ್ಚು, ವಿದ್ಯಾಸಂಸ್ಥೆ ನಿರ್ದೇಶಕಿ ಎ.ಎಂ. ಶೈಲಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ವೇದಿಕೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಸಿ.ಜೆ. ಪ್ರಿಯ, ವಿದ್ಯಾಸಂಸ್ಥೆ ಉಪಾಧ್ಯಕ್ಷ ಪಳಂಗಂಡ ಮುದ್ದಪ್ಪ, ಖಜಾಂಚಿ ಪುದಿಯೊಕ್ಕಡ ಸುಬ್ರಮಣಿ, ನಿರ್ದೇಶಕ ಈರಮಂಡ ಸೋಮಣ್ಣ, ಪೆಮ್ಮುಡಿಯಂಡ ವೇಣು ಅಪ್ಪಣ್ಣ, ದಾನಿ ಬಾಚೆಟ್ಟಿರ ಲಾಲು ಮುದ್ದಯ್ಯ ಹಾಜರಿದ್ದರು.
ಕಾಲೇಜು ವಿದ್ಯಾರ್ಥಿ ವಿದ್ಯಾವತಿ ಸ್ವಾಗತಿಸಿ, ಪ್ರಾಧ್ಯಾಪಕಿ ಬಿ.ಎಂ. ಕಲ್ಪನ ಕಾರ್ಯಕ್ರಮ ನಿರೂಪಿಸಿ, ಸ್ನೇಹ ವಂದಿಸಿದರು. ಕಾಲೇಜು ವಿದ್ಯಾರ್ಥಿಗಳಿಂದ ಹಾಡುಗಾರಿಕೆ, ಭಾಷಣ ಸ್ಪರ್ಧೆ, ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.