ಸೋಮವಾರಪೇಟೆ, ಫೆ. 18: ಕೊಡಗು ಜಿಲ್ಲಾ ಜಾನಪದ ಪರಿಷತ್, ತಾಲೂಕು ಘಟಕ ಮತ್ತು ಸೋಮವಾರಪೇಟೆ ಹೋಬಳಿ ಘಟಕದ ಆಶ್ರಯದಲ್ಲಿ ಮಾರ್ಚ್ 3 ರಂದು ಇಲ್ಲಿನ ಮಹಿಳಾ ಸಮಾಜದಲ್ಲಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಾನಪದ ನೃತ್ಯ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಹೋಬಳಿ ಘಟಕದ ಅಧ್ಯಕ್ಷ ಎಸ್.ಎ. ಮುರಳೀಧರ್ ತಿಳಿಸಿದ್ದಾರೆ.

ಸ್ಪರ್ಧೆಯಲ್ಲಿ ಜಾನಪದ ನೃತ್ಯಗಳಿಗೆ ಮಾತ್ರ ಅವಕಾಶವಿದ್ದು, ಒಂದು ಶಾಲೆಯಿಂದ ಒಂದು ತಂಡ ಭಾಗವಹಿಸಬಹುದಾಗಿದೆ. ತಂಡದಲ್ಲಿ ಕನಿಷ್ಟ 6 ರಿಂದ ಗರಿಷ್ಠ 8 ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದಾಗಿದ್ದು, ಸ್ಪರ್ಧೆಯಲ್ಲಿ ವಿಜೇತರಾಗುವ ತಂಡಕ್ಕೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಗುವದು ಎಂದು ಮುರಳೀಧರ್ ತಿಳಿಸಿದ್ದಾರೆ.

ಮಕ್ಕಳಿಗೆ ಎಳೆಯ ವಯಸ್ಸಿನಲ್ಲಿಯೇ ಜಾನಪದದ ಬಗ್ಗೆ ಅರಿವು, ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಭಾಗವಹಿಸುವ ತಂಡಗಳು ತಾ. 25 ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ನಂತರ ಬರುವ ತಂಡಗಳನ್ನು ಪರಿಗಣಿಸಲಾಗುವದಿಲ್ಲ. ಹೆಸರು ನೋಂದಾವಣೆಗಾಗಿ ಮೊ: 9008346234, 9448504728, 9591316475 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.