ಮಡಿಕೇರಿ, ಫೆ. 18: 2015-16ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ತಾ. 28 ರ ಸಂಜೆ 5.30 ರೊಳಗೆ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಪಿ.ಯು.ಸಿ, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ವೈದ್ಯಕೀಯ ಕೋರ್ಸ್ಗಳಲ್ಲಿ ಪ್ರಥಮ ದರ್ಜೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪ್ರತಿ ಸೆಮಿಸ್ಟರ್ನಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದಡಿಯಲ್ಲಿ 3 ವರ್ಷಗಳ ಪಾಲಿಟೆಕ್ನಿಕ್, ಡಿಪ್ಲೊಮಾ ಕೋರ್ಸುಗಳ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಅರ್ಜಿ ನಮೂನೆ, ವ್ಯಾಸಂಗ ಮಾಡಿದ ಕಾಲೇಜುಗಳಿಂದ ದೃಢೀಕರಿಸಿದ ಅಂಕಪಟ್ಟಿ. ಜಾತಿ ದೃಡಿsೀಕರಣ ಪ್ರಮಾಣ ಪತ್ರ ದೃಢೀಕರಣ ಹಾಗೂ ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕವನ್ನು ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.