ಸುಂಟಿಕೊಪ್ಪ, ಫೆ. 19: ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರದ ಶೇ. 90 ರಷ್ಟು ಸಹಾಯಧನದಲ್ಲಿ ರೈತರಿಗೆ ಸ್ಪ್ರಿಂಕ್ಲರಿಂಗ್ ಪೈಪ್ ಜೆಟ್ ವಿತರಿಸಲಾಗುತ್ತಿದೆ ಎಂದು ಜಿ.ಪಂ. ಸದಸ್ಯೆ ಕೆ.ಪಿ. ಚಂದ್ರಕಲಾ ಹೇಳಿದರು.
ರೈತರಿಗೆ ಸರಕಾರದಿಂದ ಹಲವು ಯೋಜನೆಗಳನ್ನು ರೂಪಿಸಿದ್ದು, ಕೃಷಿ ಇಲಾಖೆಯ ಮೂಲಕ ನೀಡಲಾಗುತ್ತಿದೆ. ಕೃಷಿಕರು ನಿತ್ಯ ಕಚೇರಿಗೆ ತೆರಳಿ ಅಲ್ಲಿ ಕೃಷಿಗೆ ಸಂಬಂಧಿಸಿದ ಬಿತ್ತನೆ ಬೀಜ, ಜೌಷಧಿ, ರಸಗೊಬ್ಬರ, ಯಂತ್ರೋಪಕರಣಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡು ಅವುಗಳಿಗೆ ಅರ್ಜಿಯನ್ನು ಸಲ್ಲಿಸುವ ಮೂಲಕ ಸರಕಾರ ನೀಡುತ್ತಿರುವ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು.
ಸುಂಟಿಕೊಪ್ಪ ಕೃಷಿ ಇಲಾಖೆಯ ಅಧಿಕಾರಿ ಪಿ.ಎಸ್. ಬೋಪಯ್ಯ ಮಾತನಾಡಿ, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿರುವ ರೈತರಿಗೆ ಆದÀ್ಯತೆ ಕ್ರಮಸಂಖ್ಯೆ ಅನುಸಾರ ರಾಜ್ಯ ಕೃಷಿ ಇಲಾಖೆಯಿಂದ ಶೇ. 90ರಷ್ಟು ಸಹಾಯಧನದಲ್ಲಿ ಸ್ಪ್ರಿಂಕ್ಲರಿಂಗ್ ಪೈಪ್ ಜೆಟ್ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ರೈತರಿಗೆ ಇದರ ಸೌಲಭ್ಯ ಸಿಗಲಿದೆ ಎಂದು ಹೇಳಿದರು.
ಸುಂಟಿಕೊಪ್ಪ ಹೋಬಳಿ ಜಿ.ಪಂ. ಸದಸ್ಯರಾದ ಪಿ.ಎಂ. ಲತೀಫ್, ಸುನಿತಾ, ತಾ.ಪಂ. ಸದಸ್ಯೆ ಓಡಿಯಪ್ಪನ ವಿಮಲಾವತಿ, ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್ ಹಾಗೂ ಕೃಷಿ ಇಲಾಖೆಯ ಸಿಬ್ಬಂದಿಗಳು ಇದ್ದರು.