ಸೋಮವಾರಪೇಟೆ, ಫೆ. 19: ಸಮೀಪದ ಗೌಡಳ್ಳಿ ಗ್ರಾಮದ ಶ್ರೀ ನವದುರ್ಗಾ ಪರಮೇಶ್ವರಿ ದೇವಾಲಯದ ಜಾತ್ರಾ ಮಹೋತ್ಸವ ತಾ. 22 ಮತ್ತು 23ರಂದು ದೇವಾಲಯದ ಆವರಣದಲ್ಲಿ ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಎಚ್.ಆರ್. ಮುತ್ತಣ್ಣ ತಿಳಿಸಿದ್ದಾರೆ.

ಬೆಳಿಗ್ಗೆ 10ಗಂಟೆಗೆ ಗೌಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಧರ್ಮಾಚಾರಿ ಜಾತ್ರೋತ್ಸವವನ್ನು ಉದ್ಘಾಟಿಸಲಿದ್ದಾರೆ. 10.30ಕ್ಕೆ ಜಾತ್ರಾ ಆವರಣದಲ್ಲಿ ಪಶು ಚಿಕಿತ್ಸಾ ಶಿಬಿರ ಮತ್ತು ಉತ್ತಮ ರಾಸುಗಳಿಗೆ ಬಹುಮಾನ ಕಾರ್ಯಕ್ರಮ ನಡೆಯಲಿದೆ. ಗೌಡಳ್ಳಿ ಆಸ್ಪತ್ರೆಯ ವೈದ್ಯಾಧಿಕಾರಿ ಇಂದೂಧರ್ ಚಾಲನೆ ನೀಡಲಿದ್ದಾರೆ.

ತಾ. 23ರಂದು ಸಾರ್ವಜನಿಕರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ. ಮಹಿಳೆಯರಿಗೆ ಬಸ್ ಹುಡುಕಾಟ, ಭಕ್ತಿಗೀತೆ, ಭಾವಗೀತೆ, ಜಾನಪದಗೀತೆ ಸ್ಪರ್ಧೆ ನಡೆಯಲಿದೆ. ಪುರುಷರಿಗೆ ನಿಧಾನವಾಗಿ ಬೈಕ್ ಚಾಲಿಸುವ ಸ್ಪರ್ಧೆ ಮತ್ತು ಮಕ್ಕಳಿಗೆ ನಿಧಾನವಾಗಿ ಸೈಕಲ್ ಚಾಲನಾ ಸ್ಪರ್ಧೆ, ಸಾರ್ವಜನಿಕರಿಗೆ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ನಡೆಯಲಿದೆ. 4.30ಕ್ಕೆ ಜಾತ್ರಾ ಸಮಾರೋಪ ಸಮಾರಂಭ ನಡೆಯಲಿದೆ.

ಕಾರ್ಯಕ್ರಮದಲ್ಲಿ ಅರೆಮಾದನ ಹಳ್ಳಿ ಮಠದ ಶ್ರೀ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿ, ತೆಂಕಲಗೋಡು ಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ಆದಿ ಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್, ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಜೆ ದೀಪಕ್, ತಾಲೂಕು ಪಂಚಾಯಿತಿ ಸದಸ್ಯೆ ಕುಸುಮಾ ಅಶ್ವಥ್, ಪ್ರಮುಖರಾದ ಎಸ್.ಬಿ. ಭರತ್‍ಕುಮಾರ್, ಎಸ್.ಡಿ. ದಿವಾಕರ, ಜಿ.ಎ. ಮಹೇಶ್, ಕೆ.ಜಿ. ದಿನೇಶ್ ಮತ್ತಿತರರು ಉಪಸ್ಥಿತರಿರುವರು. ಇದೇ ಸಂದರ್ಭ ಚೆನ್ನಾಪುರದ ಗುಲಾಬಿ ರೈ ಅವರನ್ನು ಸನ್ಮಾನಿಸಲಾಗುವದು ಎಂದು ಮುತ್ತಣ್ಣ ಅವರು ತಿಳಿಸಿದ್ದಾರೆ.

ತಾ. 24ರಂದು ರಾತ್ರಿ 10 ಗಂಟೆಗೆ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಜಾತ್ರಾ ಮೈದಾನದಲ್ಲಿ ಶ್ರೀ ಏಕಾದಶಿ ದೇವಿ ವ್ರತ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ.