ಮಡಿಕೇರಿ, ಫೆ. 20: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ 2016-17ರ ಶೈಕ್ಷಣಿಕ ಸಾಲಿನ ಕಲಾ ಮತ್ತು ವಾಣಿಜ್ಯ ಫೆಸ್ಟ್ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯತಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಜೆನಿಫರ್ ಲೋಲಿಟ ವಹಿಸಿದ್ದರು.
ಕಾರ್ಯಕ್ರಮವನ್ನು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಚಿತ್ರಾ ಉದ್ಘಾಟಿಸಿ ಮಾತನಾಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರಹಾಕಲು ಅವಕಾಶ ನೀಡುತ್ತದೆ ಎಂದರು. ಮುಖ್ಯ ಅತಿಥಿಯಾಗಿ ನಗರಸಭಾ ಸದಸ್ಯೆ ಅನಿತಾ ಪೂವಯ್ಯ ಆಗಮಿಸಿ, ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು. ಕಾಲೇಜಿನ ಪ್ರಾಧ್ಯಾಪಕ ಕೆ.ಸಿ. ದಯಾನಂದ ಕಾಲೇಜಿನಲ್ಲಿ ಆಯೋಜಿಸಿರುವ ಕಲಾ ಮತ್ತು ವಾಣಿಜ್ಯ ಫೆಸ್ಟ್ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕೆಂದು ಕಿವಿಮಾತು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಉಪನ್ಯಾಸಕಿ ನಮಿತ ಇದ್ದರು. ಬಬಿತಾ ನಿರೂಪಿಸಿ, ತೇಜಸ್ವಿನಿ ಸ್ವಾಗತಿಸಿ, ಶುೃತಿ ಪ್ರಾರ್ಥಿಸಿದರು.