ಮಡಿಕೇರಿ, ಫೆ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ.ರಮೇಶ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಅವರು ಛತ್ರಪತಿ ಶಿವಾಜಿ ಮಹಾರಾಜರು

(ಮೊದಲ ಪುಟದಿಂದ) ಶಿಸ್ತು, ಧೈರ್ಯ ಸ್ಥೈರ್ಯಕ್ಕೆ ಹೆಸರುವಾಸಿಯಾಗಿದ್ದರು ಎಂದು ಹೇಳಿದರು.

ಸರ್ವಜ್ಞ, ಶಿವಾಜಿ ಮಹಾರಾಜರ ಜಯಂತಿ ಸೇರಿದಂತೆ ಹಲವು ಜಯಂತಿಗಳನ್ನು ಆಚರಿಸಲಾಗುತ್ತಿದೆ. ಜಯಂತಿಗಳ ಉದ್ದೇಶವನ್ನು ಅರ್ಥಮಾಡಿಕೊಂಡು ವಚನಕಾರರು, ಛತ್ರಪತಿ ಸೇರಿದಂತೆ ಹಲವರ ಆದರ್ಶಗಳನ್ನು ಮೈಗೂಡಿಸಿಕೊಳ್ಳು ವಂತಾಗಬೇಕು ಎಂದು ಸಲಹೆ ಮಾಡಿದರು.

ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್ ಅವರು ಮಾತನಾಡಿ ಪ್ರಗತಿಪರ ಚಿಂತನೆಯನ್ನು ಹೊಂದಿದ ಛತ್ರಪತಿ ಶಿವಾಜಿ ಮಹಾರಾಜರು ಸರ್ವಧರ್ಮವನ್ನು ಪಾಲಿಸಿದರು. ತಮ್ಮ ಆಡಳಿತ ಅವಧಿಯಲ್ಲಿ ಮಹಿಳೆಯರಿಗೆ ಸ್ವಾತಂತ್ರ್ಯವನ್ನು ನೀಡಿದ್ದರು. ಸಾಮಾಜಿಕ ಕ್ರಾಂತಿಯ ಬದಲಾವಣೆಯ ಹರಿಕಾರ ಎಂದು ಬಣ್ಣಿಸಿದರು.

ಉಪನ್ಯಾಸಕರಾದ ಶಂಕರಯ್ಯ ಮಾತನಾಡಿ ಸರ್ವಜ್ಞ ಅವರ ವಚನಗಳು ಸದಾ ಸಾರ್ವಕಾಲಿಕವಾಗಿದೆ. ಸಾಮಾನ್ಯವಾಗಿ ಓದು, ಬರಹ ಬಾರದ ವ್ಯಕ್ತಿಗೂ ಅರ್ಥವಾಗುವ ರೀತಿಯಲ್ಲಿ ಆಡುಭಾಷೆಯ ಮುಖೇನ ತಮ್ಮ ವಚನ ತ್ರಿಪದಿಗಳನ್ನು ರಚಿಸಿರುತ್ತಾರೆ ಎಂದರು.

ಶಿವಾಜಿ ಮಹಾರಾಜರು ಸರ್ವಧರ್ಮ ಸಹಿಷ್ಣುವಾಗಿ ಆಡಳಿತ ನಡೆಸಿದರು. ದೇಶ ಪ್ರೇಮಿಯಾಗಿ ಭಾರತೀಯರಾಗಿ ತಮ್ಮ ಆಡಳಿತ ಅವಧಿಯಲ್ಲಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು ಎಂದು ಅವರು ನುಡಿದರು.

ಮರಾಠ ಸಮಾಜದ ಜಿಲ್ಲಾಧ್ಯಕ್ಷರಾದ ಎಸ್.ಎನ್. ರಾಜಾರಾವ್ ಮಾತನಾಡಿ ಶಿವಾಜಿ ಮಹಾರಾಜರು ತಮ್ಮ ಆಡಳಿತ ಅವಧಿಯಲ್ಲಿ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪ್ರತಿಯೊಬ್ಬರ ಮೆಚ್ಚುಗೆಗೆ ಪಾತ್ರರಾಗಿದ್ದರು, ಶಿವಾಜಿ ಅವರ ದೇಶಪ್ರೇಮ ಅಪಾರ ಎಂದು ತಿಳಿಸಿದರು.

ಕುಂಬಾರ ಹಾಗೂ ಕುಲಾಲ ಸಂಸ್ಥೆಯ ಜಿಲ್ಲಾಧ್ಯಕ್ಷರಾದ ಎಂ.ಡಿ.ನಾಣಯ್ಯ ಅವರು ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಳ್ಳಯ್ಯ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಕಾಂತ್ ನಾಯಕ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ್, ಇತರರು ಇದ್ದರು.

ಮರಾಠ ಸಮಾಜದ ಜಿಲ್ಲಾಧ್ಯಕ್ಷ ಎಸ್.ಎನ್. ರಾಜಾರಾವ್ ಮತ್ತು ಕುಂಬಾರ ಹಾಗೂ ಕುಲಾಲ ಸಂಸ್ಥೆಯ ಜಿಲ್ಲಾಧ್ಯಕ್ಷ ಎಂ.ಡಿ.ನಾಣಯ್ಯ ಅವರಿಗೆ ಶಾಲು, ಫಲ,ತಾಂಬೂಲ ನೀಡಿ ಇದೇ ಸಂದರ್ಭ ಸನ್ಮಾನಿಸಲಾಯಿತು.

ರವಿ ಭೂತನ ಕಾಡು ಮತ್ತು ತಂಡದವರು ಭಕ್ತಿಗೀತೆ ಹಾಗೂ ವಚನ ಗಾಯನ ನಡೆಸಿಕೊಟ್ಟರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್ ಸ್ವಾಗತಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಸಾವಿತ್ರಿ ನಿರೂಪಿಸಿದರು.