ಆಲೂರುಸಿದ್ದಾಪುರ, ಫೆ. 20: ಗ್ರಾಮೀಣ ಅಧÀ್ಯಯನ ಶಿಬಿರದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ಗ್ರಾಮೀಣ ಜೀವನದ ಅನುಭವ ಹಾಗೂ ಗ್ರಾಮೀಣ ಜನರ ಬವಣೆ, ಸ್ಥಿತಿಗತಿಗಳು ಮತ್ತು ಗ್ರಾಮೀಣ ಸಂಸ್ಕøತಿಯ ಸೊಗಡನ್ನು ಅರಿತುಕೊಳ್ಳಬೇಕು ಎಂದು ಚಿಕ್ಕ ಅಳುವಾರ ಸ್ನಾತಕೋತ್ತರ ಕೇಂದ್ರದ ಪ್ರಭಾರ ನಿರ್ದೇಶಕ ಪ್ರೊ. ವಿ. ರವೀಂದ್ರಚಾರಿ ಅಭಿಪ್ರಾಯಪಟ್ಟರು. ಅವರು ಸಮಿಪದ ಮಾಲಂಬಿ ಗಿರಿಜನ ಆಶ್ರಮ ಶಾಲೆಯಲ್ಲಿ ಚಿಕ್ಕ ಅಳುವಾರದಲ್ಲಿರುವ ಮಂಗಳೂರು ವಿ.ವಿ.ನಿಲಯದ ಸ್ನಾತಕೋತ್ತರ ಕೇಂದ್ರದ ಸಾಮಾಜಿಕ ಸೇವಾ ಅಧ್ಯಯನ (ಎಂಎಸ್ಡಬ್ಲ್ಯೂ) ವಿಭಾಗದ ವಿದ್ಯಾರ್ಥಿಗಳು ಹಮ್ಮಿಕೊಂಡಿರುವ 2017ನೇ ಸಾಲಿನ ಗ್ರಾಮೀಣ ಅಧ್ಯಯನ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಮೇಗೌಡ ಸರಕಾರದ ಯೋಜನೆಗಳು ಹಾಗೂ ಮೂಲ ಸೌಕರ್ಯಗಳಿಂದ ಕೆಲವೊಂದು ಗ್ರಾಮಗಳು ವಂಚಿತಗೊಂಡಿರುತ್ತವೆ. ಈ ದಿಸೆಯಲ್ಲಿ ಸಾಮಾಜಿಕ ಸೇವಾ ಅಧ್ಯಯನ ವಿಭಾಗದ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳಲ್ಲಿ ಅಧ್ಯಯನ ಶಿಬಿರ ನಡೆಸುವದರಿಂದ ಜನರಿಗೆ ಉಪಯೋಗವಾಗುತ್ತದೆ. ಗಿರಿಜನರ ಕಾಲೋನಿಗಳಲ್ಲಿ ಶಿಬಿರ ನಡೆಸುತ್ತಿರುವದು ಶ್ಲಾಘನೀಯ ಎಂದರು.
ಜಿ.ಪಂ. ಸದಸ್ಯೆ ಸರೋಜಮ್ಮ ಮಾತನಾಡಿ, ಗಿರಿಜನ ಸಮುದಾಯ ದವರು ಶಿಕ್ಷಣದಿಂದ ವಂಚಿತರಾಗಿ ದ್ದಾರೆ. ಗಿರಿಜನ ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವ ದಿಲ್ಲ. ಈ ನಿಟ್ಟಿನಲ್ಲಿ ಶಿಬಿರಾರ್ಥಿಗಳು ಪೋಷಕರ ಮನಸನ್ನು ಬದಲಾಯಿಸಿ ಅವರ ಮಕ್ಕಳನ್ನು ಶಾಲೆಗೆ ಸೇರಿಸುವಂತೆ ಮನವೊಲಿಸಲು ಮುಂದಾಗಬೇಕು. ಸ್ವಚ್ಛತೆ ಮತ್ತು ನೈರ್ಮಲ್ಯತೆ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಪ್ರಸ್ತಾವಿಕವಾಗಿ ಮಾತನಾಡಿದ ಸ್ನಾತಕೋತ್ತರ ಕೇಂದ್ರದ ಉಪನ್ಯಾಸಕ ರಾಬಿನ್ ಸಾಮಾಜಿಕ ಸೇವಾ ಅಧ್ಯಯನ ವಿದ್ಯಾರ್ಥಿಗಳು ಸಾಮಾಜಿಕ ಸೇವೆ ಮತ್ತು ಸಾಮಾಜಿಕ ಜೀವನದ ವಾಸ್ತಾವಾಂಶವನ್ನು ತಿಳಿದುಕೊಳ್ಳುವ ಉದ್ದೇಶದಿಂದ ಗ್ರಾಮೀಣ ಅಧ್ಯಯನ ಶಿಬಿರವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ತಾ.ಪಂ. ಸದಸ್ಯೆ ಲೀಲಾವತಿ ಮಹೇಶ್, ಗ್ರಾ.ಪಂ. ಸದಸ್ಯ ಎಸ್.ಜೆ. ಪ್ರಸನ್ನಕುಮಾರ್, ಮಾಜಿ ಗ್ರಾ.ಪಂ. ಸದಸ್ಯ ಪಿ.ಎನ್. ಗಂಗಾಧರ್, ಆಶ್ರಮ ಶಾಲೆಯ ಮುಖ್ಯ ಶಿಕ್ಷಕ ರಜನಿಕಾಂತ್ ಮುಂತಾದವರು ಇದ್ದರು. ಅಧ್ಯಯನ ಶಿಬಿರದಲ್ಲಿ ಸ್ನಾತಕೋತ್ತರ ಕೇಂದ್ರದ 16 ವಿದ್ಯಾರ್ಥಿಗಳು ಪಾಲ್ಗೊಂಡಿ ದ್ದಾರೆ.