ಮಡಿಕೇರಿ, ಫೆ. 21: ಮಾದಾಪುರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಮಾದಾಪುರ ವಲಯಕ್ಕೆ ಒಳಪಟ್ಟ ಎಲ್ಲಾ ಸರಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಕಲಿಕೋತ್ಸವ ಓದು ಬರಹ ಅಭಿವ್ಯಕ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಪಂಚಾಯಿತಿ ಸದಸ್ಯೆ ಕುಮುದಾ ಧರ್ಮಪ್ಪ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯ ಎಂ.ಎ. ಮಜೀದ್, ಶಾಂತ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಸೈನಾರ್, ಉಪಾಧ್ಯಕ್ಷೆ ಸುಭಾಷಿಣಿ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ವಸಂತಕುಮಾರ್, ಮುಖ್ಯ ಶಿಕ್ಷಕ ಎಂ. ಪುಟ್ಟಪ್ಪ, ಸಹ ಶಿಕ್ಷಕರು ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.